ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಯಾಣ್‌ ಸಿಂಗ್‌ ಆರೋಗ್ಯ ಸ್ಥಿರವಾಗಿಲ್ಲ: ಆಸ್ಪತ್ರೆ ವೈದ್ಯರ ಹೇಳಿಕೆ

Last Updated 20 ಜುಲೈ 2021, 8:09 IST
ಅಕ್ಷರ ಗಾತ್ರ

ಲಖನೌ: ‘ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿಲ್ಲ’ ಎಂದು ಸಂಜಯ್‌ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯು (ಎಸ್‌ಜಿಪಿಜಿಐಎಂಎಸ್‌) ಮಂಗಳವಾರ ಹೇಳಿದೆ.

‘ಕಲ್ಯಾಣ ಸಿಂಗ್‌ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿಲ್ಲ. ತಜ್ಞರು ಅವರ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಉಸಿರಾಟ ಸಮಸ್ಯೆಯು ತೀವ್ರವಾಗಿದ್ದರಿಂದ ಅವರಿಗೆ ವೆಂಟಿಲೇಟರ್‌ ನೆರವು ನೀಡಲಾಗಿದೆ’ ಎಂದು ಆಸ್ಪತ್ರೆ ಪ್ರಕಟಣೆ ಬಿಡುಗಡೆ ಮಾಡಿದೆ.

‘ಎಸ್‌ಜಿಪಿಜಿಐಎಂಎಸ್‌ ನಿರ್ದೇಶಕರಾದ ಆರ್‌.ಕೆ ಧಿಮನ್‌ ಅವರು ಕಲ್ಯಾಣ್‌ ಸಿಂಗ್‌ ಅವರಿಗೆ ನೀಡುತ್ತಿರುವ ಚಿಕಿತ್ಸೆ ಮೇಲೆ ನಿಗಾ ಇಟ್ಟಿದ್ದಾರೆ. ಹೃದ್ರೋಗ, ನರರೋಗ, ನೆಪ್ರೊಲಜಿ ಸೇರಿದಂತೆ ವಿವಿಧ ವಿಭಾಗಗಳ ತಜ್ಞರು ಅವರ ಆರೋಗ್ಯದ ಎಲ್ಲಾ ಅಂಶಗಳನ್ನು ನಿಕಟವಾಗಿ ಗಮನಿಸುತ್ತಿದ್ದಾರೆ’ ಎಂದು ಪ್ರಕಟಣೆ ಹೇಳಿದೆ.

ರಾಜಸ್ಥಾನದ ಮಾಜಿ ರಾಜ್ಯಪಾಲರೂ ಆಗಿರುವ ಕಲ್ಯಾಣ್‌ ಸಿಂಗ್‌(89) ಅವರು ಸೋಂಕು ಮತ್ತಿತರ ಆರೋಗ್ಯ ಸಮಸ್ಯೆಯಿಂದಾಗಿ ಜುಲೈ 4 ರಂದು ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT