ಭಾನುವಾರ, ಮೇ 16, 2021
22 °C

ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ: ಹೆಚ್ಚಿನ ನಿಗಾ ಎಂದ ಸಚಿವ ಹರ್ಷವರ್ಧನ್

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದಹೆಲಿ: ಕೋವಿಡ್ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

ಸೋಮವಾರ ಸಂಜೆ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಗ್ ಅವರ ಆರೋಗ್ಯದ ಕುರಿತ ಎಲ್ಲ ವಿವರವನ್ನು ತಜ್ಞ ವೈದ್ಯರ ಜತೆ ಚರ್ಚಿಸಲಾಗಿದೆ ಎಂದು ಸಚಿವ ಹರ್ಷ ವರ್ಧನ್ ಟ್ವೀಟ್ ಮಾಡಿದ್ದಾರೆ.

ಓದಿ: 

ನವದೆಹಲಿಯ ಏಮ್ಸ್‌ನಲ್ಲಿ ಸಿಂಗ್ ಅವರಿಗೆ ವಿಶೇಷ ಮುತುವರ್ಜಿ ವಹಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲಿ ಲಭ್ಯವಿರುವ ಎಲ್ಲ ಅತ್ಯುತ್ತಮ ಚಿಕಿತ್ಸೆಯನ್ನು ಸಿಂಗ್ ಅವರಿಗೆ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚೆಗೆ ದೇಶದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವಂತೆ ಮನಮೋಹನ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು