ರಾಹುಲ್ ಗಾಂಧಿಗೆ ಓದಲು ಬರುವುದಿಲ್ಲವೇ: ಕೇಂದ್ರ ಸಚಿವ ಹರ್ಷವರ್ಧನ್ ಪ್ರಶ್ನೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಓದಲು ಬರುವುದಿಲ್ಲವೇ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಖಾರವಾಗಿ ಪ್ರಶ್ನಿಸಿದ್ದಾರೆ.
ಲಸಿಕೆಯ ಲಭ್ಯತೆ ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಮಾಡಿರುವ ಟ್ವೀಟ್‌ಗೆ ಆಕ್ರೋಶ ವ್ಯಕ್ತಪಡಿಸಿ ಸಚಿವರು ಪ್ರತಿಕ್ರಿಯಿಸಿದ್ದಾರೆ.
ಓದಿ: ತಪ್ಪು ನನ್ನದಾದರೂ ಪರಿತಪಿಸಿದ್ದು ರಾಹುಲ್: ರಮ್ಯಾ
‘ಜುಲೈ ತಿಂಗಳ ಲಸಿಕೆ ಲಭ್ಯತೆಗೆ ಸಂಬಂಧಿಸಿದ ಅಂಕಿಅಂಶಗಳನ್ನು ನಿನ್ನೆಯಷ್ಟೇ ಬಹಿರಂಗಪಡಿಸಿದ್ದೆ. ರಾಹುಲ್ ಗಾಂಧಿ ಅವರ ಸಮಸ್ಯೆ ಏನಂತೆ? ಅವರಿಗೆ ಓದಲು ಬರುವುದಿಲ್ಲವೇ? ಅವರಿಗೆ ಅರ್ಥವಾಗುವುದಿಲ್ಲವೇ? ಅಹಂಕಾರ ಮತ್ತು ನಿರ್ಲಕ್ಷ್ಯವೆಂಬ ವೈರಸ್‌ಗೆ ಲಸಿಕೆ ಇಲ್ಲ!’ ಎಂದು ಹರ್ಷವರ್ಧನ್ ಟ್ವೀಟ್ ಮಾಡಿದ್ದಾರೆ.
Just yesterday, I put out facts on vaccine availability for the month of July.
What is @RahulGandhi Ji’s problem ?Does he not read ?
Does he not understand ?There is no vaccine for the virus of arrogance and ignorance !!@INCIndia must think of a leadership overhaul ! https://t.co/jFX60jM15w
— Dr Harsh Vardhan (@drharshvardhan) July 2, 2021
ಲಸಿಕೆ ನೀಡಿಕೆ ಅಭಿಯಾನಕ್ಕೆ ಸಂಬಂಧಿಸಿ ಈ ಹಿಂದೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಸಲಹೆ ನೀಡಿದ್ದನ್ನು ಉಲ್ಲೇಖಿಸಿದ ಅವರು, ‘ನಿಮ್ಮ ರಚನಾತ್ಮಕ ಸಹಕಾರ ಮತ್ತು ಸಲಹೆಗಳನ್ನು ಇಂಥ ಸಂಕಷ್ಟದ ಸಂದರ್ಭದಲ್ಲಿ ಇತರ ಕಾಂಗ್ರೆಸ್ ನಾಯಕರೂ ಪಾಲಿಸಬೇಕು’ ಎಂದು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.