ಶನಿವಾರ, ಸೆಪ್ಟೆಂಬರ್ 26, 2020
26 °C

ಕೋವಿಡ್‌: ಗುಣಮುಖರ ಪ್ರಮಾಣ ಶೇ 78.28ಕ್ಕೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಭಾರತದಲ್ಲಿ ಕೋವಿಡ್‌–19ನಿಂದ ಗುಣಮುಖರಾದವರ ಪ್ರಮಾಣವು ಶೇಕಡ 78.28ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 38.59 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಮಂಗಳವಾರ ತಿಳಿಸಿದೆ.

‘ದೇಶದಲ್ಲಿ ಒಟ್ಟು 9.90 ಲಕ್ಷ ಸಕ್ರಿಯ ಪ್ರಕರಣಗಳಿದ್ದು ಇದರಲ್ಲಿ ಮಹಾರಾಷ್ಟ್ರ, ಕರ್ನಾಟಕ, ಆಂಧ್ರಪ್ರದೇಶ, ಉತ್ತರ ಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳ ಪಾಲು ಶೇಕಡ 60.35ರಷ್ಟಿದೆ. ಚೇತರಿಕೆಯ ಪ್ರಮಾಣದಲ್ಲಿ ಈ ರಾಜ್ಯಗಳ ಪಾಲು ಶೇ 59.42’ ಎಂದು ಸಚಿವಾಲಯ ಹೇಳಿದೆ.

ಮಂಗಳವಾರ ಬೆಳಿಗ್ಗೆ 8 ಗಂಟೆವರೆಗಿನ ಹಿಂದಿನ 24 ತಾಸುಗಳಲ್ಲಿ ಒಟ್ಟು 1,054 ಮಂದಿ ಮೃತರಾಗಿದ್ದಾರೆ. ಸಾವಿಗೀಡಾದವರ ಪ್ರಮಾಣದಲ್ಲಿ ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ಹಾಗೂ ನವದೆಹಲಿಯ ಪಾಲು ಅಂದಾಜು ಶೇ 69ರಷ್ಟಿದೆ.

‘ಮಹಾರಾಷ್ಟ್ರದಲ್ಲೇ ಅತಿ ಹೆಚ್ಚು ಜನ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಈ ರಾಜ್ಯದಲ್ಲಿ ಇದುವರೆಗೂ 29,894 ಮಂದಿ ಸತ್ತಿದ್ದಾರೆ. ಈ ರಾಜ್ಯದಲ್ಲಿ ಹಿಂದಿನ 24 ತಾಸುಗಳಲ್ಲಿ 363 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ’ ಎಂದೂ ಸಚಿವಾಲಯ ಮಾಹಿತಿ ನೀಡಿದೆ.

ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಹಿಂದಿನ 24 ಗಂಟೆಗಳಲ್ಲಿ ಹೊಸದಾಗಿ ಒಟ್ಟು 83,809 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತಪಟ್ಟಿದೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆಯು 49.30 ಲಕ್ಷದ ಗಡಿ ದಾಟಿದೆ. ಕೋವಿಡ್‌ನಿಂದ ಮೃತರಾದವರ ಸಂಖ್ಯೆಯು 80,776ಕ್ಕೆ ಹೆಚ್ಚಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು