ಮಂಗಳವಾರ, ಮಾರ್ಚ್ 2, 2021
21 °C

ಲಸಿಕೆ ಪಡೆದಿದ್ದ ಮಹಿಳೆ ಸಾವು: ಮರಣಕ್ಕೂ ಲಸಿಕೆಗೂ ಸಂಬಂಧವಿಲ್ಲ ಎಂದ ಅಧಿಕಾರಿಗಳು

ಪಿಟಿಐ Updated:

ಅಕ್ಷರ ಗಾತ್ರ : | |

ಗುರುಗ್ರಾಮ: ಇತ್ತೀಚೆಗೆ ಕೋವಿಡ್‌ ಲಸಿಕೆ ಪಡೆದಿದ್ದ ಹರಿಯಾಣದ ಗುರುಗ್ರಾಮದ ಮಹಿಳಾ ಆರೋಗ್ಯ ಕಾರ್ಯಕರ್ತೆಯೊಬ್ಬರು ಶುಕ್ರವಾರ ಮೃತಪಟ್ಟಿದ್ದಾರೆ. ಆದರೆ ಸಾವಿಗೂ, ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

55 ವರ್ಷದ ಮಹಿಳೆ ಗುರುಗ್ರಾಮದ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.

'ಜನವರಿ 16 ರಂದು ಮಹಿಳೆಗೆ ಕೋವಿಡ್‌ ಲಸಿಕೆ ನೀಡಲಾಗಿತ್ತು. ಇಂದು ಅವರು ತಮ್ಮ ಮನೆಯಲ್ಲಿ ಹಠಾತ್‌ ಸಾವಿಗೀಡಾಗಿದ್ದಾಗಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಆದರೆ ಲಸಿಕೆಗೂ, ಸಾವಿಗೂ ಯಾವುದೇ ಸಂಬಂಧ ಇಲ್ಲ,' ಎಂದು ಗುರುಗ್ರಾಮದ ಮುಖ್ಯ ವೈದ್ಯಾಧಿಕಾರಿ ವೀರೇಂದ್ರ ಯಾದವ್ ದೂರವಾಣಿ ಮೂಲಕ ತಿಳಿಸಿದ್ದಾರೆ.

'ಆದರೂ, ಮಹಿಳೆಯ ದೇಹದ ಒಳಾಂಗಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದೇವೆ. ವರದಿ ಬಂದ ನಂತರ ವಿವರಗಳು ತಿಳಿಯುತ್ತವೆ' ಎಂದು ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು