ಸೋಮವಾರ, ಡಿಸೆಂಬರ್ 5, 2022
22 °C

ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ: ಡಿ.3ಕ್ಕೆ ಮುಂದೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಠಾಣೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ಶನಿವಾರ ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿಯ ನ್ಯಾಯಾಲಯ ಡಿ. 3 ಕ್ಕೆ ಮುಂದೂಡಿದೆ.

ಆರ್‌ಎಸ್‌ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಜಂಟಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ಎಲ್. ಸಿ. ವಾಡಿಕರ್  ವಿಚಾರಣೆ ನಡೆಸುತ್ತಿದ್ದಾರೆ. 

ಮುಂದಿನ ವಿಚಾರಣೆ ವೇಳೆ, ಹಾಜರಾಗುವುದರಿಂದ ಶಾಶ್ವತ ವಿನಾಯಿತಿ ಕೋರಿರುವ ರಾಹುಲ್‌ ಅವರ ಮನವಿಯನ್ನೂ ಕೋರ್ಟ್‌ ಆಲಿಸಲಿದೆ.

ಮಹಾತ್ಮಾ ಗಾಂಧಿ ಹತ್ಯೆ ಹಿಂದೆ ಆರ್‌ಎಸ್‌ಎಸ್ ಕೈವಾಡವಿದೆ ಎಂದು ಭಿವಂಡಿಯಲ್ಲಿ ರಾಹುಲ್ ಭಾಷಣದ ವೇಳೆ ಆರೋಪಿಸಿದ್ದರು. ನಂತರ ಕುಂಟೆ ಅವರು 2014 ರಲ್ಲಿ ಪ್ರಕರಣ ದಾಖಲಿಸಿದ್ದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು