ಸೋಮವಾರ, ಜುಲೈ 26, 2021
22 °C

ಜೂನ್‌ 21ರಂದು ಲಸಿಕೆ ಪಡೆದವರಲ್ಲಿ ಗ್ರಾಮೀಣ ಭಾಗದವರೇ ಹೆಚ್ಚು: ವೆಂಕಯ್ಯನಾಯ್ಡು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಜೂನ್‌ 21ರ ಲಸಿಕೆ ಅಭಿಯಾನದಲ್ಲಿ ಲಸಿಕೆ ಪಡೆದ ಜನರಲ್ಲಿ ಐದನೇ ಮೂರರಷ್ಟು ಜನರು ಗ್ರಾಮೀಣ ಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಈ ವಿಷಯ ನಮ್ಮ ಉತ್ಸಾಹವನ್ನು ಹೆಚ್ಚಿಸಿದೆ’ ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಹೇಳಿದ್ದಾರೆ.

‘ಜೂನ್‌ 21ರಂದು 88.09 ಲಕ್ಷ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಪರಿಷ್ಕೃತ ಲಸಿಕೆ ನೀತಿ ಜಾರಿಗೆ ಬಂದ ಬಳಿಕ ಗ್ರಾಮೀಣ ಪ್ರದೇಶಗಳಲ್ಲಿ ಶೇ 64ರಷ್ಟು ಲಸಿಕೆ ನೀಡಲಾಗಿದೆ’ ಎಂದು ಸರ್ಕಾರ ಹೇಳಿದೆ.

ದೇಶದ ಬಹುತೇಕ ಜನಸಂಖ್ಯೆಯೂ ಗ್ರಾಮೀಣ ಪ್ರದೇಶದಲ್ಲಿದೆ. ಸೋಮವಾರ ಲಸಿಕೆ ಪಡೆದ ಜನರಲ್ಲಿ ಐದನೇ ಮೂರರಷ್ಟು ಜನರು ಗ್ರಾಮೀಣ ಭಾಗದವರು ಎಂಬ ವಿಷಯ ಉತ್ಸಾಹ ಹೆಚ್ಚಲು ಕಾರಣವಾಗಿದೆ. ‘ಟೀಂ ಇಂಡಿಯಾ’ ಎಂಬ ಮನೋಭಾವದಲ್ಲಿ ಜತೆಯಾಗಿ ಕೆಲಸ ಮಾಡಿದ ಕೇಂದ್ರ ಮತ್ತು ರಾಜ್ಯಗಳಿಗೆ ನನ್ನ ಅಭಿನಂದನೆಗಳು’ ಎಂದು ನಾಯ್ಡು ಅವರು ಬುಧವಾರ ಟ್ವೀಟ್‌ ಮಾಡಿದ್ದಾರೆ.

‘ಲಸಿಕೆ ಅಭಿಯಾನವನ್ನು ಉತ್ತಮವಾಗಿ ನಡೆಸುತ್ತಿರುವ ರಾಜ್ಯಗಳು ತಮ್ಮ ಕ್ರಮಗಳನ್ನು ಇತರೆ ರಾಜ್ಯಗಳೊಂದಿಗೆ ಹಂಚಿಕೊಳ್ಳಬೇಕು. ಜನರು ಕೂಡ ಆದಷ್ಟು ಬೇಗ ಲಸಿಕೆಯನ್ನು ಪಡೆದುಕೊಳ್ಳಬೇಕು’ ಎಂದು ಅವರು ಹೇಳಿದರು.

ಮಂಗಳವಾರದ ವೇಳೆಗೆ ದೇಶದಲ್ಲಿ 29 ಕೋಟಿಗೂ ಹೆಚ್ಚು ಲಸಿಕೆಯ ಡೋಸ್‌ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು