ಶನಿವಾರ, ಮೇ 28, 2022
22 °C

ದೇಶದೆಲ್ಲೆಡೆ ಬಿಸಿ ಗಾಳಿ ಪ್ರಭಾವ ತುಸು ಕಡಿಮೆಯಾಗಿದೆ: ಹವಾಮಾನ ಇಲಾಖೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದೆಲ್ಲೆಡೆ ಬಿಸಿಗಾಳಿಯ ಪ್ರಭಾವ ತುಸು ಕಡಿಮೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ.

ರಾಜಸ್ಥಾನ, ಪಂಜಾಬ್, ದೆಹಲಿ ಹಾಗೂ ಹರಿಯಾಣಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್‌ಗಳಷ್ಟು ಇಳಿಕೆಯಾಗಿದೆ ಎಂದು ಇಲಾಖೆ ತಿಳಿಸಿದೆ.

ವಾಯವ್ಯ, ಕೇಂದ್ರ ಹಾಗೂ ಪೂರ್ವ ಭಾರತದ ಯಾವುದೇ ಪ್ರದೇಶಗಳಲ್ಲಿ ಮುಂದಿನ ಐದು ದಿನಗಳ ಕಾಲ ಬಿಸಿಗಾಳಿಯ ತೀವ್ರತೆ ಇರಲಾರದು ಎಂದೂ ಇಲಾಖೆ ಹೇಳಿದೆ.

ವಾಯವ್ಯ ಮತ್ತು ಕೇಂದ್ರ ಭಾರತದ ಗರಿಷ್ಠ ತಾಪಮಾನದಲ್ಲಿ ಮುಂದಿನ 2–3 ದಿನಗಳಲ್ಲಿ ಭಾರಿ ಬದಲಾವಣೆ ಕಾಣಿಸದು. ಆ ಬಳಿಕ 2–3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಬಹುದು. ಮಹಾರಾಷ್ಟ್ರ ಹಾಗೂ ರಾಜಸ್ಥಾನದ ಕೆಲವಡೆ ಬುಧವಾರದ ಬಳಿಕ ಬಿಸಿ ಗಾಳಿ ಪರಿಸ್ಥಿತಿ ಮರುಕಳಿಸುವ ಸಾಧ್ಯತೆಯೂ ಇದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ವಾಯವ್ಯ ಮತ್ತು ಮಧ್ಯ ಭಾರತದಲ್ಲಿ 5 ದಿನಗಳು ಮತ್ತು ಪೂರ್ವ ಭಾರತದಲ್ಲಿ ಮುಂದಿನ 3 ದಿನ ಬಿಸಿ ಗಾಳಿ ಇರಲಿದ್ದು, ಆ ಬಳಿಕ ತಗ್ಗಲಿದೆ ಎಂದು ಇಲಾಖೆ ಏಪ್ರಿಲ್ 29ರಂದು ಹೇಳಿತ್ತು. ಅದಾಗಿ ಕೆಲವು ದಿನಗಳಲ್ಲಿ ದೇಶದ ಹಲವೆಡೆ ಗರಿಷ್ಠ ತಾಪಮಾನ ವರದಿಯಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು