ಸೋಮವಾರ, ಜನವರಿ 17, 2022
21 °C
ಎನ್‌ಡಿಆರ್‌ಎಫ್‌,ಎಸ್‌ಡಿಆರ್‌ಎಫ್‌ ತಂಡಗಳ ನಿಯೋಜನೆ

ಮಹಾರಾಷ್ಟ್ರ: ಮಾಹಿಮ್‌ ಕೇಳ್ವ ಅಣೆಕಟ್ಟೆಯಲ್ಲಿ ಭಾರಿ ಸೋರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯಲ್ಲಿರುವ ಮಾಹಿಮ್‌ ಕೇಳ್ವ ಅಣೆಕಟ್ಟೆಯಲ್ಲಿ ಭಾರಿ ಪ್ರಮಾಣದ ಸೋರಿಕೆ ಕಂಡು ಬಂದಿದೆ.

ಅಣೆಕಟ್ಟೆಯ ಕೆಳಪ್ರದೇಶದಲ್ಲಿರುವ ಗ್ರಾಮಗಳ ಜನರನ್ನು ಸ್ಥಳಾಂತರಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಚಾಲನೆ ನೀಡಿದ್ದು, ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳನ್ನು ನಿಯೋಜಿಸಲಾಗಿದೆ.

ಜಿಲ್ಲಾಧಿಕಾರಿ ಡಾ.ಮಾಣಿಕ್ ಗುರ್ಸಾಲ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದತ್ತಾತ್ರೇಯ ಶಿಂಧೆ ಅವರು ಸ್ಥಳಕ್ಕೆ ಭೇಟಿ ನೀಡಿ, ಜನರ ಸ್ಥಳಾಂತರ ಹಾಗೂ ಇತರ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ನಡೆಸಿದ್ದಾರೆ.

ಈ ಅಣೆಕಟ್ಟು ಝಾಂಜರೋಳಿ ಗ್ರಾಮದ ಬಳಿ ಇದ್ದು, ಮುಂಬೈನಿಂದ 110 ಕಿ.ಮೀ. ದೂರದಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.