ಬುಧವಾರ, ಜೂನ್ 23, 2021
24 °C

ಮಹಾರಾಷ್ಟ್ರ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಭಾರತದ ಹಲವು ರಾಜ್ಯಗಳಲ್ಲಿ ಮಳೆಯ ಮುನ್ನೆಚ್ಚರಿಕೆ– ಚಿತ್ರ ಕೃಪೆ: ಹವಾಮಾನ ಇಲಾಖೆ

ಬೆಂಗಳೂರು: ದೇಶದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯಾಗುವ ಪ್ರದೇಶಗಳ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾನ್ಸೂನ್‌ನ ಎರಡನೇ ಹಂತದ ನಿರಂತರ ಮಳೆಯು ಹಲವು ರಾಜ್ಯಗಳಲ್ಲಿ ಪ್ರವಾಹ ಹಾಗೂ ಭೂಕುಸಿತ ಉಂಟು ಮಾಡಿದ್ದು, ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಕಳೆದ ಕೆಲವು ದಿನಗಳಿಂದ ಕೇರಳ, ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಪರಿಸ್ಥಿತಿ ಕಠಿಣ ಸ್ವರೂಪಕ್ಕೆ ತಿರುಗಿದೆ.

ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಇಲಾಖೆ ಪ್ರಕಾರ, 'ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು, ಕೇರಳ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪಂಜಾಬ್‌, ಪಶ್ಚಿಮ ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಪೂರ್ವ ಮಧ್ಯ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ'.

ಜಮ್ಮು ಮತ್ತು ಕಾಶ್ಮೀರ, ಲಡಾಖ್‌, ಮುಜಾಫರಾಬಾದ್, ಹರಿಯಾಣ, ಚಂಡೀಗಢ, ದೆಹಲಿ, ವಿದರ್ಭ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಒಡಿಶಾ, ಅಸ್ಸಾಂ ಹಾಗೂ ಮೇಘಾಲಯದಲ್ಲೂ ತೀವ್ರ ಮಳೆಯ ಮುನ್ಸೂಚನೆ ನೀಡಲಾಗಿದೆ. ಪ್ರವಾಸ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗುವಂತೆ ರಾಜ್ಯ ಸರ್ಕಾರಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿವೆ.

ಭಾರಿ ಮಳೆಯಾಗುವ ಪ್ರದೇಶಗಳಲ್ಲಿ ಜನರು ಮುನ್ನೆಚ್ಚರಿಕೆ ವಹಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ತಿಳಿಸಿದೆ. ದೇಶದ ವಿವಿಧ ಭಾಗಗಳಲ್ಲಿ ಎನ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು