ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಸೋಮವಾರದಿಂದ ಭಾರೀ ಮಳೆಯಾಗುತ್ತಿದ್ದು ರೈಲು ಮತ್ತು ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿದೆ.
ರಾತ್ರಿ ವ್ಯಾಪಕವಾಗಿ ಮಳೆಯಾಗಿದ್ದು 15ಕ್ಕೂ ಹೆಚ್ಚು ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದೆ. ದೆಹಲಿಗೆ ಬರುವ ಕೆಲವು ರೈಲುಗಳು ತಡವಾಗಿ ಬರಲಿವೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
10 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. 7 ವಿಮಾನಗಳನ್ನು ಜೈಪುರಕ್ಕೆ, 3 ವಿಮಾನಗಳನ್ನು ಲಖನೌಗೆ ತೆರಳುವಂತೆ ಸೂಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ.
ಹಲವು ಪ್ರದೇಶಗಳಲ್ಲಿ ಸೋಮವಾರ ಹಗಲು ಮತ್ತು ರಾತ್ರಿ ಧಾರಾಕಾರ ಮಳೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆಯಿಂದಾಗಿ ಹಲವೆಡೆ ಸಂಚಾರ ದಟ್ಟಣೆ ಉಂಟಾಗಿತ್ತು. ಯಾವುದೇ ಹಾನಿ ಉಂಟಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳವಾರ ಕನಿಷ್ಠ ತಾಪಮಾನ 17.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇನ್ನು ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.