ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಧಾರಾಕಾರ ಮಳೆ ಸುರಿದ ಪರಿಣಾಮ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
ಬುಧವಾರ ಸಂಜೆ ವೇಳೆಗೆ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯಿತು. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಇಳಿಯಬೇಕಿದ್ದ 9 ವಿಮಾನಗಳನ್ನು ಜೈಪುರಕ್ಕೆ ತಿರುಗಿಸಲಾಗಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.
ಮೂರರಿಂದ ನಾಲ್ಕು ದಿನ ಕವಿದ ವಾತಾವರಣವಿರಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.