ಗುರುವಾರ , ಅಕ್ಟೋಬರ್ 6, 2022
26 °C

ಮುಂಬೈನಲ್ಲಿ ಭಾರಿ ಮಳೆ: ಭೂಕುಸಿತದಿಂದ 25 ಮಂದಿ ಸಾವು, ಹಲವರಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

ಮಹಾರಾಷ್ಟ್ರ: ಮುಂಬೈನಲ್ಲಿ ಶನಿವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮಹುಲ್ ಪ್ರದೇಶದ ಭಾರತ್‌ ನಗರದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಹಲವು ಮನೆಗಳ ಗೋಡೆ ಕುಸಿದಿದ್ದು, ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಮುಂಜಾನೆ 1 ಗಂಟೆ ಸುಮಾರಿಗೆ ಗೋಡೆ ಕುಸಿದಿದ್ದು, ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸತತ ಮಳೆಯಿಂದಾಗಿ ಮುಂಬೈನ ವಿಕ್ರೋಲಿ ಉಪನಗರದಲ್ಲಿ ಮುಂಜಾನೆ 2.30ಕ್ಕೆ ಭೂಕುಸಿತ ಸಂಭವಿಸಿದೆ. ಇದರಿಂದಾಗಿ 5 ಗುಡಿಸಲುಗಳು ಕುಸಿದಿದ್ದು, ಮೂವರು ನಿವಾಸಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್‌), ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಭಾರಿ ಮಳೆಯಿಂದಾಗಿ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಕೆರೆಯಂತಾಗಿರುವ ರಸ್ತೆಗಳು ಕಾರುಗಳು ಸೇರಿದಂತೆ ಹಲವು ವಾಹನಗಳು ತೇಲಿ ಹೋಗಿವೆ. ಸಂಚಾರ ವ್ಯವಸ್ಥೆಗೆ ಅಡಚಣೆ ಉಂಟಾಗಿದ್ದು, ಉಪನಗರ ರೈಲು ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ... ಮುಂಬೈ: ರಾತ್ರಿಯಿಡೀ ಸುರಿದ ಭಾರಿ ಮಳೆ, ಹಲವು ಪ್ರದೇಶಗಳು ಜಲಾವೃತ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು