ಶುಕ್ರವಾರ, ಡಿಸೆಂಬರ್ 2, 2022
19 °C

ತಮಿಳುನಾಡು: ಮಳೆಗೆ ಮತ್ತೆ 3 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸಾವಿನ ಸಂಖ್ಯೆ 26ಕ್ಕೆ ಏರಿದೆ ಎಂದು ರಾಜ್ಯ ಸರ್ಕಾರ ಶನಿವಾರ ತಿಳಿಸಿದೆ.

ಚೆನ್ನೈನಲ್ಲಿ ಇಬ್ಬರು ಮತ್ತು ತಿರುವಳ್ಳೂರು ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ.

ನಾಗಪಟ್ಟಿನಂ ಜಿಲ್ಲೆಯ ಕೊಡಿಯಕಾರೈನಲ್ಲಿ ಅತಿ ಹೆಚ್ಚು ಅಂದರೆ, 9 ಸೆಂ.ಮೀ ಮಳೆಯಾಗಿದೆ. ರಾಮೇಶ್ವರಂನಲ್ಲಿ 8 ಸೆಂ.ಮೀ ಮಳೆ ಸುರಿದಿದೆ.

ಭಾರಿ ಮಳೆಯಿಂದಾಗಿ ಸುಮಾರು 25 ಜಾನುವಾರುಗಳು ಕಾಣೆಯಾಗಿವೆ. ಸುಮಾರು 140 ಮನೆಗಳಿಗೆ ಹಾನಿಯಾಗಿದೆ. ಚೆನ್ನೈನಲ್ಲಿ ಧರೆಗುರುಳಿದ್ದ ಸುಮಾರು 64 ಮರಗಳನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.