ಮಲಪ್ಪುರಂ (ಕೇರಳ): ಕೇರಳದ ವಿವಿಧ ಕಡೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಂಗಳವಾರ ಮುಂಜಾನೆ ಮಲಪ್ಪುರಂ ಜಿಲ್ಲೆಯ ಕರಿಪುರದಲ್ಲಿ ಮನೆಯೊಂದು ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಆರು ತಿಂಗಳ ಮಗು ಮತ್ತು ಆಕೆಯ ಸಹೋದರಿ ಎಂಟು ವರ್ಷದ ಬಾಲಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಕ್ಕಳು, ಮುಂಡೋಟ್ಟುಪದಮ್ ಸಮೀಪದ ಮಠಮ್‌ಕುಲಂನಲ್ಲಿನ ತನ್ನ ಅಜ್ಜನ ಮನೆಯಲ್ಲಿ ವಾಸವಿದ್ದರು. ಅದೇ ಕಟ್ಟಡ ಈಗ ಮಳೆಗೆ ಕುಸಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಮೂಲಗಳ ಪ್ರಕಾರ, ’ಮುಂಜಾನೆ 4.30ರ ಸುಮಾರಿಗೆ ಸುರಿದ ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಈ ಸಂತ್ರಸ್ತ ಕುಟುಂಬದ ನಿವಾಸದ ಮೇಲೆ ಕುಸಿದಿದೆ. ಪರಿಣಾಮವಾಗಿ ಮನೆಯೊಳಗಿದ್ದ ಮಕ್ಕಳು ತೀವ್ರವಾಗಿ ಗಾಯಗೊಂಡಿವೆ. ತಕ್ಷಣ ಅವರನ್ನುಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೂ ಚಿಕಿತ್ಸೆಗೆ ಸ್ಪಂದಿಸದೆ ಮಕ್ಕಳು ಮೃತಪಟ್ಟಿವೆ.

ಕೇರಳದಾದ್ಯಂತಸೋಮವಾರದಿಂದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮಂಗಳವಾರವೂ ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.