ಭಾನುವಾರ, ಆಗಸ್ಟ್ 14, 2022
20 °C
24 ಗಂಟೆಗಳಲ್ಲಿ ಭೂಕುಸಿತದಲ್ಲಿ ಸಿಲುಕಿ ಇಬ್ಬರು ಸಾವು

ಅರುಣಾಚಲ ಪ್ರದೇಶದಲ್ಲಿ ಮಳೆ, ಭೂಕುಸಿತ–ಜನ ತತ್ತರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವ ಪರಿಣಾಮ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹಲವೆಡೆ ಭೂಕುಸಿತ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಭೂಕುಸಿತದಲ್ಲಿ ಸಿಲುಕಿ ಇಬ್ಬರು ಮೃತ‍ಪಟ್ಟಿದ್ದು, ನಾಪತ್ತೆಯಾದ ಇನ್ನೊಬ್ಬ ವ್ಯಕ್ತಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸಾರಿಗೆ ಮತ್ತು ಸಂಪರ್ಕ ವ್ಯವಸ್ಥೆ ಕಡಿತಗೊಂಡಿದೆ. ಪ್ರವಾಹದಿಂದ 52 ಗ್ರಾಮಗಳ 7,000 ಮಂದಿ ತೊಂದರೆಗೊಳಗಾಗಿದ್ದಾರೆ.

ಅನೇಕ ಕಡೆಗಳಲ್ಲಿ ಕುಡಿಯುವ ನೀರು ಮತ್ತು ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ತೀವ್ರ ಮಳೆ ಕಾರಣದಿಂದ ಕಳೆದ ಮೂರು ದಿನಗಳಿಂದ ಶಾಲೆ ಮತ್ತು ಕಾಲೇಜುಗಳನ್ನು ಮುಚ್ಚಲಾಗಿದೆ ಎಂದು ತಿಳಿಸಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಈ ವರ್ಷ ಪ್ರವಾಹ ಮತ್ತು ಭೂಕುಸಿತದಲ್ಲಿ ಸಿಲುಕಿ 17 ಮಂದಿ ಮೃತಪಟ್ಟಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು