ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಭಾರಿ ಮಳೆ: ಐದು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

Last Updated 3 ಜುಲೈ 2022, 12:43 IST
ಅಕ್ಷರ ಗಾತ್ರ

ತಿರುವನಂತಪುರಂ (ಪಿಟಿಐ): ಕೇರಳದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಭಾನುವಾರ ರಾಜ್ಯದ ಐದು ಜಿಲ್ಲೆಗಳಾದಇಡುಕ್ಕಿ, ತ್ರಿಶ್ಶೂರ್, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡುಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

ಮೇಲಿನ ಐದು ಜಿಲ್ಲೆಗಳು ಸೇರಿದಂತೆ ಸೋಮವಾರ ಮತ್ತು ಮಂಗಳವಾರ ರಾಜ್ಯದ 14 ಜಿಲ್ಲೆಗಳ ಪೈಕಿ ಒಂಬತ್ತು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಜುಲೈ 7ರ ವರೆಗೆ ಕೇರಳ-ಲಕ್ಷದ್ವೀಪ-ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT