ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈನಲ್ಲಿ ಭಾರಿ ಮಳೆ: ಆರೇಂಜ್‌ ಅಲರ್ಟ್‌ ಘೋಷಣೆ

Last Updated 13 ಸೆಪ್ಟೆಂಬರ್ 2022, 14:25 IST
ಅಕ್ಷರ ಗಾತ್ರ

ಮುಂಬೈ: ಮುಂಬೈ ಮತ್ತು ಅಕ್ಕಪಕ್ಕದ ನಗರಗಳಲ್ಲಿ ಮಂಗಳವಾರ ಬೆಳಿಗ್ಗೆ ಭಾರಿ ಮಳೆಯಾಗಿದ್ದು, ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ರಾಯಗಡ, ರತ್ನಗಿರಿ ಮತ್ತು ಸತಾರಾ ಜಿಲ್ಲೆಯ ಕೆಲ ಭಾಗಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಐಎಂಡಿ ಹೇಳಿದ್ದು, ಆರೇಂಜ್‌ ಅಲರ್ಟ್‌ ಘೋಷಿಸಿದೆ.

ಮುಂಬೈ ಮತ್ತು ಅದರ ಉಪನಗರಗಳಲ್ಲಿ ಮಂಗಳವಾರ ಬೆಳಿಗ್ಗೆ 8:30ಕ್ಕೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ 93.4 ಮಿ.ಮೀ. ಮಳೆಯಾಗಿದೆ. ಇದೇ ಅವಧಿಯಲ್ಲಿ ಕೊಲಬಾದಲ್ಲಿ 59.2 ಮಿ.ಮೀ. ಮಳೆಯಾಗಿದೆ ಎಂದು ಐಎಂಡಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT