ಮಂಗಳವಾರ, ಮಾರ್ಚ್ 28, 2023
23 °C

ಮುಂಬೈನಲ್ಲಿ ಭಾರಿ ಮಳೆ: ರೈಲು ಸಂಚಾರದಲ್ಲಿ ವ್ಯತ್ಯಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಶುಕ್ರವಾರ ಮುಂಜಾನೆಯಿಂದ ಮುಂಬೈ ಮತ್ತು ಅದರ ಉಪನಗರಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೆಲವೆಡೆ ರೈಲ್ವೆ ಹಳಿಗಳ ಮೇಲೆ ನೀರು ನಿಂತಿದ್ದು ರೈಲು ಸೇವೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನ ಪೂರ್ವ ಮತ್ತು ಪಶ್ಚಿಮ ಉಪ ನಗರಗಳಲ್ಲಿ ಕ್ರಮವಾಗಿ 7.5 ಸೆಂ.ಮೀ ಮತ್ತು 7.3 ಸೆಂ.ಮೀ ಮಳೆಯಾಗಿದೆ. ವಿವಿಧ ರೈಲು ನಿಲ್ದಾಣಗಳಲ್ಲಿನ ಹಳಿಗಳ ಮೇಲೆ ನೀರು ನಿಂತಿರುವುದರಿಂದ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ಅವರು ತಿಳಿಸಿದ್ದಾರೆ. 

ನಗರದ ರಸ್ತೆಗಳ ಮೇಲೂ ಮಳೆಯ ನೀರು ಹರಿಯುತ್ತಿದ್ದು, ವಾಹನ ಸಂಚಾರವೂ ಸ್ಥಗಿತವಾಗಿದೆ. ಮುಂಬೈ ಮತ್ತು ಅದರ ಉಪನಗರಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿತ್ತು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು