ಹೈದರಾಬಾದ್: ತೆಲಂಗಾಣ ಹಾಗೂ ಆಂಧ್ರಪ್ರದೇಶ ರಾಜ್ಯಗಳ ಹಲವು ಭಾಗಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ.

ಭದ್ರಾಚಲಂನಲ್ಲಿ ಗೋದಾವರಿ ನದಿಯು ಅಪಾಯದ ಮಟ್ಟ ಮೀರುವ ಹಂತದಲ್ಲಿದೆ. ಸೋಮವಾರದ ವೇಳೆಗೆ ನದಿಯ ನೀರಿನ ಮಟ್ಟವು 60.7 ಅಡಿ ದಾಟಿದೆ ಎಂದು ಮೂಲಗಳು ತಿಳಿಸಿವೆ.

ನದಿ ಹಾಗೂ ಇತರೆ ಜಲಮೂಲಗಳು ತುಂಬಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದ್ದು ಪ್ರವಾಹದ ಭೀತಿ ಸೃಷ್ಟಿಯಾಗಿದೆ. ಇದರಿಂದ ಸಾರಿಗೆ ಸಂಚಾರವೂ ಅಸ್ತವ್ಯಸ್ತಗೊಂಡಿದೆ.

‘ಉತ್ತರ ತೆಲಂಗಾಣದ ಕರೀಂನಗರ, ವಾರಂಗಲ್, ಹಾಗೂ ಕಮ್ಮಂ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಸಂಕಷ್ಟದಲ್ಲಿ ಸಿಲುಕಿರುವವರಿಗೆ ಆಹಾರ ಸಾಮಗ್ರಿ ಸೇರಿದಂತೆ ಇತರೆ ಅಗತ್ಯ ವಸ್ತುಗಳನ್ನು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ’ ಎಂದು ಆರೋಗ್ಯ ಸಚಿವ ಈಟಲ ರಾಜೇಂದ್ರ ಹೇಳಿದ್ದಾರೆ.

ಆಂಧ್ರಪ್ರದೇಶದ ಗೋದಾವರಿ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಳುಗಡೆ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಜಗಮೋಹನ್ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.