ಗುರುವಾರ , ಜನವರಿ 28, 2021
15 °C

ತಮಿಳುನಾಡಿನಲ್ಲಿ ಭಾರಿ ಮಳೆ; ಚೆಂಬರಂಬಕ್ಕಂ ಜಲಾಶಯದಿಂದ ನೀರು ಬಿಡುಗಡೆ

ಪಿಟಿಐ Updated:

ಅಕ್ಷರ ಗಾತ್ರ : | |

ಚೆನ್ನೈ: ನಗರ ಸೇರಿದಂತೆ ತಮಿಳುನಾಡಿನ ಹಲವಡೆ ಮಂಗಳವಾರ ಬೆಳಿಗ್ಗೆಯಿಂದ ಭಾರಿ ಮಳೆಯಾಗುತ್ತಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಚೆಂಬರಂಬಕ್ಕಂ ಜಲಾಶಯದಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗಿದೆ. ಅಡ್ಯಾರ್ ನದಿಯ ಸುತ್ತಮುತ್ತಲ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಹಲವು ದಿನಗಳ ಬಳಿಕ ಚೆನ್ನೈನಲ್ಲಿ ಮಳೆಯಾಗಿದೆ. ನಗರದ ಪ್ರಮುಖ ರಸ್ತೆಗಳು ನೀರಿನಿಂದ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡಿದರು. ಮುಂದಿನ ಹಲವು ಗಂಟೆಗಳಲ್ಲಿ ವಿಲ್ಲುಪುರಂ, ಚೆಂಗಲ್ಪಟ್ಟು, ಕಾಂಚೀಪುರಂ, ಕಡಲೂರು, ನಾಗಪಟ್ಟಣಂ ಮತ್ತು ತಿರುವಣ್ಣಾಮಲೈ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಚೆಂಬರಂಬಕ್ಕಂ ಜಲಾಶಯದಿಂದ 500 ಕ್ಯೂಸೆಕ್‌ ಹೆಚ್ಚುವರಿ ನೀರನ್ನು ಅಡ್ಯಾರ್‌ ನದಿಗೆ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು