ಸೋಮವಾರ, ಅಕ್ಟೋಬರ್ 26, 2020
27 °C

ಕೇರಳ: 10 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರ: ಕೇರಳ ದಲ್ಲಿ ಸೋಮವಾರವೂ ಭಾರಿ ಮಳೆ ಯಾಗಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’‌ ಘೋಷಿಸಲಾಗಿದೆ.ಹೆಚ್ಚು ಮಳೆಯಾಗುತ್ತಿರುವ ವಯನಾಡು, ಮಲಪ್ಪುರಂ ಮತ್ತು ತ್ರಿಶೂರ್‌ ಜಿಲ್ಲೆಗಳಲ್ಲಿ ಮಳೆ ಸಂಬಂಧಿ ಅವಘಡಗಳ ನಿರ್ವಹಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್‌) ತಲಾ ಒಂದೊಂದು ತಂಡಗಳನ್ನು ನಿಯೋಜನೆ ಮಾಡಲಾಗಿದೆ.

ದಿನವೊಂದರಲ್ಲಿ 6ರಿಂದ 20 ಸೆಂ.ಮೀ.ನಷ್ಟು ಮಳೆಯಾಗುವ ಸಾಧ್ಯತೆ ಇದ್ದರೆ ‘ಆರೆಂಜ್ ಅಲರ್ಟ್’ ಘೋಷಿಸ ಲಾಗುತ್ತದೆ. ರಾಜ್ಯದಲ್ಲಿ ಹಿಂದಿನ 24 ಗಂಟೆಗಲ್ಲಿ ಸರಾಸರಿ 7 ಸೆಂ.ಮೀ. ಮಳೆಯಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ 8 ಮನೆಗಳು ನೆಲಕಚ್ಚಿವೆ. ತಿರುವನಂತಪುರದಲ್ಲಿ ಮಳೆ ಸಂಬಂಧಿ ಘಟನೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮಳೆಯಿಂದ ಉರುಳಿಬಿದ್ದಿದ್ದ ವಿದ್ಯುತ್ ಕಂಬದಲ್ಲಿನ ತಂತಿಯನ್ನು ಮುಟ್ಟಿ, ವಿದ್ಯುದಾಘಾತದಿಂದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ಮಾಹಿತಿ ನೀಡಿದೆ.

ರಾಜ್ಯದ ಕುಂಡಳ, ಕಲ್ಲಾರ್‌ಕುಟ್ಟಿ, ಮಲಂಗರ ಮತ್ತು ಪೊನ್ಮುಡಿ ಜಲಾಶಯ ಗಳಿಗೆ ಒಳಹರಿವು ಹೆಚ್ಚಾಗಿದ್ದು, ಜಲಾಶಯಗಳು ಭರ್ತಿಯಾಗುತ್ತಿವೆ. ಹೀಗಾಗಿ ಈ ಜಲಾಶಯಗಳಿಂದ ನೀರನ್ನು ಹೊರಗೆ ಬಿಡಲಾಗತ್ತಿದೆ. ಇದರಿಂದಾಗಿ ಪೆರಿಯಾರ್, ಮುತಿರಪುಳ ಮತ್ತು ಮೂವಟ್ಟುಪುಳ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು