ದೆಹಲಿ ಗಡಿ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಪೊಲೀಸ್ ಪಡೆ ನಿಯೋಜನೆ

ನವದೆಹಲಿ: ದೆಹಲಿಯ ಗಡಿ ಪ್ರದೇಶಗಳಲ್ಲಿ ಗುರುವಾರ ಭಾರೀ ಪ್ರಮಾಣದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
‘ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ರೈತರ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಹಿಂಸಾಚಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೆಹಲಿಯ ಗಡಿ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಅಲ್ಲದೆ ಕೆಂಪು ಕೋಟೆಗೂ ಬಿಗಿ ಭದ್ರತೆಯನ್ನು ನೀಡಲಾಗಿದೆ’ ಎಂದು ಅವರು ಹೇಳಿದರು.
‘ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 25 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಘಟನೆಯಲ್ಲಿ 394 ಸಿಬ್ಬಂದಿ ಗಾಯಗೊಂಡಿದ್ದಾರೆ. 30 ಪೊಲೀಸ್ ವಾಹನಗಳು ಹಾನಿಗೊಳಗಾಗಿವೆ’ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.