ಸೋಮವಾರ, ಅಕ್ಟೋಬರ್ 25, 2021
25 °C

ಜಮ್ಮು–ಕಾಶ್ಮೀರದ ಉಧಂಪುರ ಸಮೀಪ ಹೆಲಿಕಾಪ್ಟರ್‌ ಪತನ; ಇಬ್ಬರು ಪೈಲಟ್ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

Prajavani

ಜಮ್ಮು (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ಪಟ್ನಿಟಾಪ್‌ ಬಳಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಸೇನೆಯ ಹೆಲಿಕಾಪ್ಟರ್ ಪತನಗೊಂಡಿದ್ದು ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪಟ್ನಿಟಾಪ್ ಪ್ರದೇಶದಲ್ಲಿ ತರಬೇತಿ ನಿರತವಾಗಿದ್ದ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಶಿವ್ ಗರ್ ಧರ್ ಪ್ರದೇಶದಲ್ಲಿ ಅಪಘಾತಕ್ಕೀಡಾಯಿತು ಎಂದು ಜಮ್ಮು ಮೂಲದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಪೈಲಟ್‌ಗಳಾದ ಮೇಜರ್ ರೋಹಿತ್ ಕುಮಾರ್ ಮತ್ತು ಮೇಜರ್ ಅನುಜ್ ರಜಪೂತ್ ಗಾಯಗೊಂಡಿದ್ದರು. ಇಬ್ಬರನ್ನೂ ಹತ್ತಿರದ ವೈದ್ಯಕೀಯ ಸೌಲಭ್ಯದ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ಅವರು ಹೇಳಿದರು.

ಬೆಳಿಗ್ಗೆ 10.30ರಿಂದ 10.45ರ ನಡುವೆ ಈ ಘಟನೆ ಸಂಭವಿಸಿದೆ. ಘಟನೆ ಸಂಭವಿಸಿದಾಗ ಪಟ್ನಿಟಾಪ್ ಮೇಲೆ ದಟ್ಟ ಮಂಜು ಕವಿದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಇದನ್ನೂ ಓದಿ–ಸುಧಾರಿತ ಸ್ಫೋಟಕ ಸಾಧನ ಪತ್ತೆ; ಜಮ್ಮು–ಕಾಶ್ಮೀರದಲ್ಲಿ ತಪ್ಪಿದ ಅನಾಹುತ

'ನಮಗೆ ಮಾಹಿತಿ ಬಂದ ಕೂಡಲೇ ಪೊಲೀಸರ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ' ಎಂದು ಉಧಂಪುರದ ಡಿಐಜಿ ಸುಲೆಮಾನ್‌ ಚೌಧರಿ ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು