ಮುಂಬೈ: ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ

ಮುಂಬೈ: ದ್ವಿಚಕ್ರವಾಹನದಲ್ಲಿ ಪ್ರಯಾಣಿಸುವ ಹಿಂಬದಿ ಸವಾರರಿಗೂ ಮುಂಬೈ ಸಂಚಾರ ಪೊಲೀಸರು ಹೆಲ್ಮೆಟ್ ಕಡ್ಡಾಯಗೊಳಿಸಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.
‘ಈ ನಿಯಮವು 15 ದಿನಗಳ ಬಳಿಕ ಜಾರಿಗೆ ಬರಲಿದ್ದು, ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಮುಂಬೈನ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಇಲ್ಲದೇ ವಾಹನ ಚಲಾಯಿಸುತ್ತಿದ್ದು, ಪ್ರಸ್ತುತ ಅವರಿಗೆ ₹500 ದಂಡ ವಿಧಿಸಲಾಗುತ್ತಿದೆ ಅಥವಾ ಚಾಲನಾ ಪರವಾನಿಗೆಯನ್ನು ರದ್ದುಗೊಳಿಸಲಾಗುತ್ತಿದೆ. ಇನ್ನುಮುಂದೆ ಹಿಂಬದಿ ಸವಾರು ಹೆಲ್ಮೆಟ್ ಧರಿಸದಿದ್ದರೆ ಅವರಿಗೂ ಇದೇ ಕ್ರಮ ಕೈಗೊಳ್ಳಲಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.