ಗುರುವಾರ , ಡಿಸೆಂಬರ್ 1, 2022
27 °C

ಕಾರಾಗೃಹ ಇಲಾಖೆ ಪೊಲೀಸ್ ಮಹಾನಿರ್ದೇಶಕ ಲೋಹಿಯಾ ಕೊಲೆ: ಆರೋಪಿ ಬಂಧನ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಜಮ್ಮು: ಕಾರಾಗೃಹ ಇಲಾಖೆ ಪೊಲೀಸ್ ಮಹಾನಿರ್ದೇಶಕ ಹೇಮಂತ್‌ ಲೋಹಿಯಾ ಹತ್ಯೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಜಮ್ಮುವಿನಲ್ಲಿ ಅವರು ಕೊಲೆಯಾಗಿದ್ದರು. ಅವರ ಮನೆಯ ಸಹಾಯಕ ಯಾಸೀರ್‌ ಅಹಮ್ಮದ್‌ ಲೋಹಿಯಾ ಅವರ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ಮಾಡಲಾಗುತ್ತಿದೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ.

ಮನೆ ಕೆಲಸ ಮಾಡುತ್ತಿದ್ದ ಯಾಸೀರ್‌ ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ಎಂದು ಮತ್ತೊಬ್ಬ ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

1992ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ 57 ವರ್ಷದ ಲೋಹಿಯಾ ಅವರು ಜಮ್ಮುವಿನ ಹೊರವಲಯದಲ್ಲಿರುವ ಉದಯವಾಲಾ ನಿವಾಸದಲ್ಲಿ ನೆಲೆಸಿದ್ದರು. ಅಲ್ಲಿಯೇ ಅವರನ್ನು ಕೊಲೆ ಮಾಡಲಾಗಿದೆ. 

ಅವರನ್ನು ಆಗಸ್ಟ್‌ನಲ್ಲಿ ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನಿಯೋಜಿಸಲಾಗಿತ್ತು. ಅಧಿಕಾರಿ ಸಾವಿಗೆ ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆ ತೀವ್ರ ಬೇಸರ ವ್ಯಕ್ತಪಡಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು