ಭಾನುವಾರ, ಏಪ್ರಿಲ್ 11, 2021
32 °C

ಪಾರಂಪರಿಕ ಕಟ್ಟಡಗಳ ಸೌಂದರ್ಯಕ್ಕೆ ಕುತ್ತು ತಂದ ಅತಿಕ್ರಮಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜೈಪುರ (ಪಿಟಿಐ): ಅರಮನೆ ನಗರಿ ಜೈಪುರದಲ್ಲಿ 3,130ಕ್ಕೂ ಹೆಚ್ಚು ಅತಿಕ್ರಮಣಗಳು ಮತ್ತು ಅಕ್ರಮ ನಿರ್ಮಾಣಗಳು ಪಾರಂಪರಿಕ ಕಟ್ಟಡಗಳ ಮುಖಚಹರೆಯನ್ನೇ ಬದಲಾಯಿಸಿವೆ ಎಂದು ರಾಜಸ್ಥಾನ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಶಾಂತಿ ಧರಿವಾಲ್ ಶುಕ್ರವಾರ ಹೇಳಿದ್ದಾರೆ.

ಬಿಜೆಪಿ ಶಾಸಕ ಜಗ್ಸಿರಾಮ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2019ರಲ್ಲಿ ನಡೆಸಿದ ಸರ್ವೆಯಲ್ಲಿ ಅತಿಕ್ರಮಣ ಮತ್ತು ಅಕ್ರಮ ನಿರ್ಮಾಣಗಳನ್ನು ಗುರುತಿಸಲಾಗಿದೆ ಎಂದು ಸದನಕ್ಕೆ ಮಾಹಿತಿ ನೀಡಿದರು.

ಕೋಟೆಯ ನಗರ ಪ್ರದೇಶಗಳಲ್ಲಿ ವಾಸಿಸುವ ಜನರು ಹಲವಾರು ದಶಕಗಳಿಂದ ಅಕ್ರಮ ನಿರ್ಮಾಣ ಮತ್ತು ಅತಿಕ್ರಮಣ ನಡೆಸಿದ್ದಾರೆ. ಅತಿಕ್ರಮಣ ಮಾಡಿ ನಿರ್ಮಿಸಿರುವ ಕಟ್ಟಡಗಳು ಅರಮನೆ ನಗರಿಯ ಬಾಹ್ಯನೋಟವನ್ನೇ ಬದಲಿಸಿಬಿಟ್ಟಿವೆ. 2019ರ ಜನವರಿಯಿಂದ ಈವರೆಗೆ 739 ಒತ್ತುವರಿದಾರರಿಗೆ ಮಹಾನಗರ ಪಾಲಿಕೆ ನೋಟಿಸ್‌ಗಳನ್ನು ನೀಡಿದೆ ಎಂದು ಸಚಿವರು ತಿಳಿಸಿದರು.

ಕೋವಿಡ್‌ ಕಾರಣಕ್ಕಾಗಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲು ಮತ್ತು ಒತ್ತುವರಿದಾರರ ವಿರುದ್ಧ ಕ್ರಮ ಜರುಗಿಸಲು ಆಗಿರಲಿಲ್ಲ. ಈಗ ಮಹಾನಗರ ಪಾಲಿಕೆಯು ಕ್ರಮ ಕೈಗೊಳ್ಳುತ್ತಿದೆ ಎಂದು ಸಚಿವ ಧರಿವಾಲ್‌ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು