ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಮೀನುಗಾರಿಕೆ ದೋಣಿಯಲ್ಲಿ ಸಾಗಿಸುತ್ತಿದ್ದ ₹400 ಕೋಟಿ ಮೌಲ್ಯದ ಹೆರಾಯಿನ್‌ ವಶ

Last Updated 20 ಡಿಸೆಂಬರ್ 2021, 11:23 IST
ಅಕ್ಷರ ಗಾತ್ರ

ಅಹಮಾದಾಬಾದ್‌: ಗುಜರಾತ್‌ ಕರಾವಳಿಯಲ್ಲಿ ಪಾಕಿಸ್ತಾನದ ಮೀನುಗಾರಿಕೆ ದೋಣಿಯೊಂದರಲ್ಲಿ ಸಾಗಿಸುತ್ತಿದ್ದ ₹400 ಕೋಟಿ ಮೌಲ್ಯದ 77 ಕೆಜಿ ಹೆರಾಯಿನ್‌ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿದ್ದ 6 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.

ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಗುಜರಾತ್‌ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್‌) ಭಾನುವಾರ ರಾತ್ರಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ಮಾದಕ ದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

‘ಹೆಚ್ಚಿನ ತನಿಖೆಗಾಗಿ ದೋಣಿಯನ್ನು ಕಚ್‌ ಜಿಲ್ಲೆಯ ಜಖೌ ತೀರಕ್ಕೆ ತರಲಾಗಿದೆ’ ಎಂದೂ ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ ಕಛ್‌ನ ಮುಂದ್ರಾ ಬಂದರಿನಲ್ಲಿ ₹21 ಸಾವಿರ ಕೋಟಿ ಮೌಲ್ಯದ 3 ಸಾವಿರ ಕೆ.ಜಿ ಡ್ರಗ್ಸ್‌ ಪತ್ತೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT