ಮಂಗಳವಾರ, ಸೆಪ್ಟೆಂಬರ್ 28, 2021
22 °C
ಜೂನಿಯರ್ ಕಾಲೇಜು ಪ್ರವೇಶಕ್ಕೆ ಸಿಇಟಿ

ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲು ತಜ್ಞರ ಸಮಿತಿ: ಪರಿಶೀಲಿಸಲು ಹೈಕೋರ್ಟ್‌ ನಿರ್ದೇಶನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಜೂನಿಯರ್‌ ಕಾಲೇಜಿನ ಪ್ರಥಮ ವರ್ಷದ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲು ವಿವಿಧ ಶಿಕ್ಷಣ ಮಂಡಳಿಗಳಲ್ಲಿರುವ ತಜ್ಞರನ್ನೊಳಗೊಂಡ ಸಮಿತಿ ರಚಿಸುವ ಕುರಿತು ಪರಿಶೀಲನೆ ನಡೆಸುವಂತೆ ಬಾಂಬೆ ಹೈಕೋರ್ಟ್‌ ಮಹಾರಾಷ್ಟ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಆರ್.ಡಿ. ಧನುಕಾ ಮತ್ತು ಆರ್. ಐ.ಚಾಗ್ಲಾ ಅವರನ್ನೊಳಗೊಂಡ ಪೀಠವು ಮಹಾರಾಷ್ಟ್ರ ಸರ್ಕಾರದ ಪರ ಹಾಜರಾಗಿದ್ದ ವಕೀಲರಿಗೆ ಈ ನಿರ್ದೇಶನ ನೀಡಿದ್ದು, ಸಮಿತಿ ರಚನೆ ಕುರಿತು ನ್ಯಾಯಾಲಯ ನೀಡಿದ ‌ಸಲಹೆಯನ್ನು ಕಾರ್ಯಗತಗೊಳಿಸಬಹುದೇ ಹಾಗೂ ಪ್ರಸ್ತುತ ಉದ್ಭವಿಸಿರುವ ಸಮಸ್ಯೆಗೆ ಇದು ಸೂಕ್ತ ಪರಿಹಾರವಾಗುತ್ತದೆಯೇ‘ ಎಂದು ಕೇಳಿದೆ.

‘ಸಿಇಟಿ ಮೂಲಕ ಜೂನಿಯರ್‌ ಕಾಲೇಜುಗಳಿಗೆ ಪ್ರವೇಶ ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಸಿಇಟಿ ಪ್ರಶ್ನೆ ಪತ್ರಿಕೆಯು ಎಸ್‌ಎಸ್‌ಸಿ ಮಂಡಳಿಯ ಪಠ್ಯಕ್ರಮವನ್ನು ಆಧರಿಸಿರುತ್ತದೆ‘ ಎಂಬ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ಐಸಿಎಸ್‌ಇ ವಿದ್ಯಾರ್ಥಿನಿ ಹಾಗೂ ಮತ್ತಿತರು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು