ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಸೀಟು: ಇಡಬ್ಲ್ಯೂಎಸ್‌ಗೆ ಮೀಸಲಾತಿ ಒಪ್ಪಲಾಗದು– ಮದ್ರಾಸ್‌ ಹೈಕೋರ್ಟ್‌

Last Updated 25 ಆಗಸ್ಟ್ 2021, 16:23 IST
ಅಕ್ಷರ ಗಾತ್ರ

ಚೆನ್ನೈ: ‘ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (ಇಡಬ್ಲ್ಯೂಎಸ್‌) ವೈದ್ಯಕೀಯ ಸೀಟುಗಳ ಅಖಿಲ ಭಾರತ ಕೋಟಾದಲ್ಲಿ ಶೇ 10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಒಪ್ಪಲಾಗದು. ಇಂಥ ನಿರ್ಧಾರಕ್ಕೆ ಸುಪ್ರೀಂಕೋರ್ಟ್‌ನ ಅನುಮೋದನೆ ಅಗತ್ಯ’ ಎಂದು ಮದ್ರಾಸ್‌ ಹೈಕೋರ್ಟ್‌ ಬುಧವಾರ ಹೇಳಿದೆ.

ಮುಖ್ಯನ್ಯಾಯಮೂರ್ತಿ ಸಂಜೀವ್‌ ಬ್ಯಾನರ್ಜಿ, ನ್ಯಾಯಮೂರ್ತಿ ಪಿ.ಡಿ.ಆದಿಕೇಶವಲು ಅವರಿರುವ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.

‘ಶೇ 10ರಷ್ಟು ಮೀಸಲಾತಿ ನೀಡಿ ಕೇಂದ್ರ ಸರ್ಕಾರ ಜುಲೈ 29ರಂದು ಅಧಿಸೂಚನೆ ಹೊರಡಿಸಿದೆ. ಆದರೆ, ಸುಪ್ರೀಂಕೋರ್ಟ್‌ನ ಅನುಮೋದನೆ ಪಡೆಯುವವರೆಗೆ ಈ ಮೀಸಲಾತಿಗೆ ಅನುಮತಿ ನೀಡಲಾಗಿಲ್ಲ ಎಂದೇ ಪರಿಗಣಿಸಬೇಕು’ ಎಂದು ನ್ಯಾಯಪೀಠ ಹೇಳಿತು.

ಅಖಿಲ ಭಾರತ ಕೋಟಾಕ್ಕಾಗಿ (ಎಐಕ್ಯೂ) ತಮಿಳುನಾಡು ಸರ್ಕಾರ ಬಿಟ್ಟುಕೊಟ್ಟಿದ್ದ ಸೀಟುಗಳಲ್ಲಿ ಒಬಿಸಿಗೆ ಶೇ 50ರಷ್ಟು ಮೀಸಲಾತಿ ನೀಡುವಂತೆ ಕೋರಿ ಡಿಎಂಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಈ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT