ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೌಢಶಾಲೆ, ಕಾಲೇಜುಗಳಿಗೆ 3 ದಿನ ರಜೆ ಘೋಷಿಸಿದ ಸಿಎಂ: ಶಾಂತಿ ಕಾಪಾಡಲು ಮನವಿ

Last Updated 8 ಫೆಬ್ರುವರಿ 2022, 13:50 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಪ್ರೌಢ ಶಾಲೆ, ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಂತಿ–ಸೌಹಾರ್ದತೆ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಸಿಎಂ ಆದೇಶದಂತೆ ಬುಧವಾರದಿಂದ ಮೂರು ದಿನ ರಾಜ್ಯದಲ್ಲಿ ಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಇರಲಿದೆ.

ಟ್ವಿಟರ್‌ನಲ್ಲಿ ಈ ಬಗ್ಗೆ ಪೋಸ್ಟ್‌ ಪ್ರಕಟಿಸಿರುವ ಅವರು, ‘ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಕರ್ನಾಟಕದ ಜನತೆಗೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಕಾಲ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲು ನಾನು ಆದೇಶಿಸಿದ್ದೇನೆ. ಎಲ್ಲರೂ ಸಹಕರಿಸಬೇಕಾಗಿ ವಿನಂತಿ,’ ಎಂದು ಅವರು ಬರೆದುಕೊಂಡಿದ್ದಾರೆ.

ಇದಕ್ಕೂ ಮೊದಲು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಿಎಂ ಬೊಮ್ಮಾಯಿ, ‘ನಾವು ಕರ್ನಾಟಕ ಹೈಕೋರ್ಟ್‌ನ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ವಿದ್ಯಾರ್ಥಿಗಳಲ್ಲಿ ಮನವಿ ಮಾಡುತ್ತೇನೆ. ವಿದ್ಯಾರ್ಥಿಗಳಲ್ಲಿ ಯಾವುದೇ ಘರ್ಷಣೆಗಳು ನಡೆಯದಂತೆ ನೋಡಿಕೊಳ್ಳಲು ಶಾಲಾ ಆಡಳಿತಕ್ಕೆ ನಿರ್ದೇಶನ ನೀಡಿದ್ದೇನೆ. ಪ್ರಚೋದನಕಾರಿ ಹೇಳಿಕೆಗಳನ್ನು ನೀಡದಂತೆ ಎಲ್ಲ ವ್ಯಕ್ತಿಗಳಿಗೆ ಮನವಿ ಮಾಡುತ್ತೇನೆ’

ಇತ್ತ,ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT