ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್‌: ವಿದ್ಯಾರ್ಥಿನಿಯರ ವೈಯಕ್ತಿಕ ಮಾಹಿತಿ ಸೋರಿಕೆ, ರಾಜ್ಯಸಭೆಯಲ್ಲಿ ಪ್ರಸ್ತಾಪ

Last Updated 25 ಮಾರ್ಚ್ 2022, 12:44 IST
ಅಕ್ಷರ ಗಾತ್ರ

ನವದೆಹಲಿ: ಹಿಜಾಬ್‌ ವಿಷಯಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಮೊದಲು ಪ್ರತಿಭಟಿಸಿದ ವಿದ್ಯಾರ್ಥಿನಿಯರ ವೈಯಕ್ತಿಕ ಮಾಹಿತಿ ಸೋರಿಕೆಯಾಗಿದ್ದ ವಿಷಯ ರಾಜ್ಯಸಭೆಯಲ್ಲಿ ಶುಕ್ರವಾರ ಪ್ರಸ್ತಾಪಗೊಂಡು, ಚರ್ಚೆಗೆ ಕಾರಣವಾಯಿತು.

ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಟಿಎಂಸಿ ಸಂಸದೆ ಮೌಸಮ್‌ ನೂರ್‌, ‘ವೈಯಕ್ತಿಕ ಮಾಹಿತಿ ಹಕ್ಕುಗಳ ರಕ್ಷಣೆಗೆ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಹಿಜಾಬ್‌ ವಿವಾದ ಭುಗಿಲೆದ್ದ ವೇಳೆಯೇ, ಕನಿಷ್ಠ ಆರು ಜನ ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವೈಯಕ್ತಿಕ ವಿವರಗಳನ್ನು ಸೋರಿಕೆ ಮಾಡಲಾಗಿದ್ದು, ಈ ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ’ ಎಂದರು.

‘ವಿದ್ಯಾರ್ಥಿನಿಯರ ಹೆಸರು, ವಿಳಾಸ ಮತ್ತಿತರ ವೈಯಕ್ತಿಕ ವಿವರಗಳನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಇದು ಅವರ ಖಾಸಗಿತನದ ಉಲ್ಲಂಘನೆಯಾಗಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT