ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಕಿನಿಯಾಗಲಿ, ಹಿಜಾಬ್ ಆಗಲಿ ಬೇಕಾದ್ದನ್ನು ಧರಿಸುವುದು ಮಹಿಳೆಯ ಹಕ್ಕು: ಪ್ರಿಯಾಂಕಾ

Last Updated 9 ಫೆಬ್ರುವರಿ 2022, 6:41 IST
ಅಕ್ಷರ ಗಾತ್ರ

ಬೆಂಗಳೂರು: ಬಿಕಿನಿಯಾಗಲಿ ಅಥವಾ ಹಿಜಾಬ್ ಆಗಲಿ ತನಗೆ ಬೇಕಾದುದನ್ನು ಧರಿಸುವುದು ಮಹಿಳೆಯ ಹಕ್ಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಅದು ಬಿಕಿನಿಯಾಗಿರಲಿ, ಘೂಂಘಾಟ್(ಮುಸುಕು) ಆಗಿರಲಿ, ಜೀನ್ಸ್ ಆಗಿರಲಿ ಅಥವಾ ಹಿಜಾಬ್ ಆಗಿರಲಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು ಎಂದು ಅವರು ಹೇಳಿದ್ದಾರೆ.

ಈ ಹಕ್ಕನ್ನು ಭಾರತೀಯ ಸಂವಿಧಾನವು ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ. #ಲಡ್ಕಿಹೂನ್‌ಲಡ್‌ಸಕ್ತಿಹೂನ್ ಎಂಬ ಹ್ಯಾಶ್ ಟ್ಯಾಗ್ ನೀಡಿ ಅವರು ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷ ಕುಂದಾಪುರದಿಂದ ಬೇರೆ ಬೇರೆ ಜಿಲ್ಲೆಗಳಿಗೂ ವ್ಯಾಪಿಸಿದೆ. ಕೆಲವೆಡೆ ಪ್ರತಿಭಟನೆ, ಕಲ್ಲು ತೂರಾಟ, ಮಾತಿನ ಚಕಮಕಿಯೂ ನಡೆದಿದೆ. ಪರಿಸ್ಥಿತಿ ಕೈಮೀರುವುದನ್ನು ಅರಿತ ರಾಜ್ಯ ಸರ್ಕಾರ 3 ದಿನಗಳ ಕಾಲ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT