ಹಿಮಾಚಲ ಚುನಾವಣೆ: ಮಧ್ಯಾಹ್ನದ ವೇಳೆಗೆ ಶೇ 45ರಷ್ಟು ಮತದಾನ

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು ಮಧ್ಯಾಹ್ನ 3 ಗಂಟೆ ವೇಳೆಗೆ ಶೇ 45ರಷ್ಟು ಮತದಾನವಾಗಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ.
ಶನಿವಾರ ಬೆಳಿಗ್ಗೆ ಎಂಟು ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 5ರವರೆಗೆ ನಡೆಯಲಿದೆ.
Unshakeable spirit! Massive turnout of women of the Dhanderwadi, remotest village of Shimla. They stand firm amid extreme cold and tough terrains to cast their VOTES. @hpelection @DC_Shimla @AdityaNegiHP @ECISVEEP @SpokespersonECI #HimachalPradeshElections pic.twitter.com/9GqOvIedIC
— DEO Shimla (@deoshimla771) November 12, 2022
ಮತದಾನಕ್ಕೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಭದ್ರತೆಗೆ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಅಲ್ಲಲ್ಲಿ ಸಣ್ಣಪುಟ್ಟ ಗಲಾಟೆಗಳನ್ನು ಹೊರತುಪಡಿಸಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
68 ಸದಸ್ಯ ಬಲದ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಎರಡನೇ ಬಾರಿಗೆ ಅಧಿಕಾರ ಹಿಡಿದು ಇತಿಹಾಸ ಸೃಷ್ಟಿಸುವ ಇರಾದೆಯಲ್ಲಿದೆ. ಅತ್ತ ಕಾಂಗ್ರೆಸ್‌ಗೆ ಅಳಿವು-ಉಳಿವಿನ ಪ್ರಶ್ನೆ ಎದುರಾಗಿದೆ.
ಹಿಮಾಚಲದಲ್ಲಿ 55 ಲಕ್ಷಕ್ಕೂ ಹೆಚ್ಚು ಮತದಾರರು 412 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.