ಹಿಮಾಚಲ ಸಿ.ಎಂ ಸುಖ್ಖುಗೆ ಕೋವಿಡ್-19, ಅಧಿವೇಶನ ಮುಂದೂಡಿಕೆ

ಶಿಮ್ಲಾ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖ್ಖು ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ರಾಜ್ಯ ಸರ್ಕಾರದ ವಕ್ತಾರರು ಸೋಮವಾರ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸೋಮವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಭೇಟಿಯನ್ನು ಮುಂದೂಡಲಾಗಿದೆ ಎಂದು ಅವರು ಹೇಳಿದರು.
ಪ್ರಧಾನಿ ಭೇಟಿಗೂ ಮುನ್ನ ನಡೆಸಿದ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ಗೊತ್ತಾಗಿದೆ.
ಗುರುವಾರದಿಂದ ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಹಿಮಾಚಲ ವಿಧಾನಸಭೆಯ ಮೂರು ದಿನಗಳ ಅಧಿವೇಶನವನ್ನು ಕೂಡ ಮುಂದೂಡಲಾಗಿದೆ. ಅವರ ಆರೋಗ್ಯ ಸುಧಾರಣೆ ಬಳಿಕ ದಿನಾಂಕ ನಿಗದಿಗೊಳಿಸಲಾಗುವುದು ಎಂದು ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಪ್ರಮಾಣ ವಚನ ಬೋಧಿಸುವುದು, ಸ್ಪೀಕರ್ ಆಯ್ಕೆ ಮತ್ತು ರಾಜ್ಯಪಾಲರ ಭಾಷಣ ಮೂರು ದಿನಗಳ ವೇಳಾಪಟ್ಟಿಯಲ್ಲಿ ಸೇರಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.