ಹೈದರಾಬಾದ್: ಹಿಮಾಚಲ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ದತ್ತಾತ್ರೇಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ -65ರ (ಹೈದರಾಬಾದ್- ವಿಜಯವಾಡ) ಬಳಿ ಈ ಅಪಘಾತ ಸಂಭವಿಸಿದೆ. ಆದರೆ ಯಾರಿಗೂ ಗಾಯಗಳಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಪ್ರಾಥಮಿಕ ಮಾಹಿತಿ ಪ್ರಕಾರ ರಾಜ್ಯಪಾಲರು ನಲ್ಗೊಂಡ ಜಿಲ್ಲೆಗೆ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ ಎಂದು ಅವರು ಮಾಹಿತಿ ನೀಡಿದರು. ಬಳಿಕ ರಾಜ್ಯಪಾಲರು ಇನ್ನೊಂದು ವಾಹನದಲ್ಲಿ ಪ್ರಯಾಣ ಮುಂದುವರಿಸಿದರು ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.