ಭಾನುವಾರ, ಮಾರ್ಚ್ 26, 2023
25 °C

ಹಿಮಾಚಲಕ್ಕೆ ‘ಡಬಲ್‌ ಎಂಜಿನ್‌‘ ಸರ್ಕಾರ ಬೇಕು: ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಚಂಬಿ/ಸುಜನ್ಪುರ್, ಹಿಮಾಚಲ ಪ್ರದೇಶ (ಪಿಟಿಐ): ಹಿಮಾಚಲ ಪ್ರದೇಶಕ್ಕೆ ‘ಡಬಲ್ ಎಂಜಿನ್’ ನ ಸ್ಥಿರ ಮತ್ತು ಬಲಿಷ್ಠ  ಸರ್ಕಾರದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದರು.

ಕಾಂಗ್ರಾ ಜಿಲ್ಲೆ ಮತ್ತು ಸುಜಾನ್‌ಪುರದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಮೋದಿ, ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ರಾಜ್ಯಕ್ಕೆ ದ್ರೋಹ ಬಗೆದಿದೆ ಮತ್ತು ಅಭಿವೃದ್ಧಿಯ ಶತ್ರು ಎಂದು ಆರೋಪಿಸಿದರು.

2017ರ ವರೆಗೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ತಾವು ಪ್ರಧಾನಿಯಾದ ನಂತರ ಕಾಂಗ್ರೆಸ್‌ ಪ್ರಗತಿಗೆ ಅಡ್ಡಿಪಡಿಸುವ ಕೆಲಸ ಮಾಡಿದ್ದರಿಂದ ರಾಜ್ಯದ ಅಭಿವೃದ್ಧಿಗೆ ಬಿಜೆಪಿ ಅಧಿಕಾರದಲ್ಲಿ ಉಳಿಯುವುದು ಅಗತ್ಯ ಎಂದರು.

ಗುಡ್ಡಗಾಡು ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳುವ ಬಿಜೆಪಿ ಪ್ರಯತ್ನಕ್ಕೆ ಪ್ರತಿಸ್ಪರ್ಧಿಯಾಗಿರುವ ಕಾಂಗ್ರೆಸ್, ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮಾತ್ರ ಅಭಿವೃದ್ಧಿಗೆ ಅಡ್ಡಿಯಾಗುತ್ತದೆ. ಬಿಜೆಪಿಯನ್ನು ಅಧಿಕಾರಕ್ಕೆ ತರಲು ರಾಜ್ಯದ ಜನರು ಮನಸ್ಸು ಮಾಡಿದ್ದಾರೆ ಎಂದು ಅವರು ಪ್ರತಿಪಾದಿಸಿದರು.

ರಾಜಸ್ಥಾನ ಮತ್ತು ಛತ್ತೀಸ್‌ಗಡ ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದೆ. ಕಾಂಗ್ರೆಸ್ ನ ಆಂತರಿಕ ಕಲಹದ ವರದಿಗಳು ಅಲ್ಲಿಂದ ಹೊರಬರುತ್ತವೆ ಎಂದು ಅವರು ಹೇಳಿದರು.

ಕಾಂಗ್ರೆಸ್ ವಿರುದ್ಧ ಜನರಿಗೆ ಎಷ್ಟು ಕೋಪವಿದೆಯೆಂದರೆ, ಅದನ್ನು ಸೋಲಿಸಿದ ನಂತರ ದಶಕಗಳಿಂದ ಅನೇಕ ರಾಜ್ಯಗಳಲ್ಲಿ ಅಧಿಕಾರಕ್ಕೆ ಆಯ್ಕೆ ಮಾಡಿಲ್ಲ ಎಂದು ತಮಿಳುನಾಡು, ಬಿಹಾರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ ಉದಾಹರಣೆಗಳನ್ನು  ಮೋದಿ ಉಲ್ಲೇಖಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು