ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Himachal Pradesh: ಹೊಸ ದಾಖಲೆಯತ್ತ ಬಿಜೆಪಿ, ಕಾಂಗ್ರೆಸ್‌ಗೆ ಬಹುಮತದ ವಿಶ್ವಾಸ

Last Updated 8 ಡಿಸೆಂಬರ್ 2022, 6:56 IST
ಅಕ್ಷರ ಗಾತ್ರ

ನವದೆಹಲಿ: ಅಭಿವೃದ್ಧಿ ಮಂತ್ರವನ್ನೇ ಪ್ರಮುಖ ಕಾರ್ಯಸೂಚಿ ಮಾಡಿಕೊಂಡು ಮತ ಯಾಚಿಸಿದ್ದ ಬಿಜೆಪಿ ಹಿಮಾಚಲ ಪ್ರದೇಶದಲ್ಲಿ ಎರಡನೇ ಬಾರಿಗೆ ಅಧಿಕಾರ ಹಿಡಿದು ಇತಿಹಾಸ ಸೃಷ್ಟಿಸುವ ಕಡೆ ದೃಷ್ಟಿ ನೆಟ್ಟಿದೆ. ಆಡಳಿತಾರೂಢ ಪಕ್ಷಕ್ಕೆ ಎರಡನೇ ಬಾರಿ ಅಧಿಕಾರ ನೀಡಿರುವ ಉದಾಹರಣೆಯು ನಾಲ್ಕು ದಶಕದಿಂದ ಈಚೆಗೆ ರಾಜ್ಯದಲ್ಲಿ ಇಲ್ಲ. ಈ ಇತಿಹಾಸವನ್ನು ಮುಂದುವರಿಸುವಂತೆ ವಿರೋಧ ಪಕ್ಷ ಕಾಂಗ್ರೆಸ್‌ ಮತದಾರರಲ್ಲಿ ಮನವಿ ಮಾಡಿದೆ.

ಇಂದು (ಗುರುವಾರ) ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ಬಿಜೆಪಿ ಅಧಿಕಾರ ಗದ್ದುಗೆ ಏರುವ ನಿರೀಕ್ಷೆಯಲ್ಲಿದೆ. ಇತ್ತ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ ಎಂದು ಕಾಂಗ್ರೆಸ್ ಭರವಸೆಯಾಗಿದೆ.

ಹಿಮಾಚಲ ಪ್ರದೇಶದ 68 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 12 ರಂದು ಮತದಾನ ನಡೆದಿದ್ದು,

68 ಕ್ಷೇತ್ರಗಳ ಹಿಮಾಚಲ ಪ್ರದೇಶ ವಿಧಾನಸಭೆಗೆ ನ.12ರಂದು ಮತದಾನ ನಡೆದಿತ್ತು. ರಾಜ್ಯದಲ್ಲಿ ಶೇ 75.6 ರಷ್ಟು ಮತದಾನವಾಗಿದ್ದು, 2017ರ ದಾಖಲೆಯನ್ನು ಮುರಿದಿದೆ. ಮುಖ್ಯಮಂತ್ರಿ ಜೈರಾಮ್‌ ಠಾಕೂರ್‌, ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್‌ ಅವರ ಮಗ ವಿಕ್ರಮಾದಿತ್ಯ ಸಿಂಗ್‌ ಸೇರಿ 412 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 55 ಲಕ್ಷಕ್ಕೂ ಹೆಚ್ಚು ಮತದಾರರು ಇವರ ರಾಜಕೀಯ ಭವಿಷ್ಯ ನಿರ್ಧರಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ನೇತೃತ್ವದಲ್ಲಿ ಬಿಜೆಪಿ ಸರಣಿ ಚುನಾವಣಾ ಸಮಾವೇಶಗಳನ್ನು ನಡೆಸಿತ್ತು.

ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ನೇತೃತ್ವದಲ್ಲಿ ಪಕ್ಷದ ಬಹುತೇಕ ಪ್ರಚಾರ ಸಮಾವೇಶಗಳು ನಡೆದಿವೆ. ಬಿಜೆಪಿ ಮುಷ್ಟಿಯಿಂದ ರಾಜ್ಯವನ್ನು ಪಡೆದುಕೊಳ್ಳುವುದು ಕಾಂಗ್ರೆಸ್‌ಗೆ ಅಳಿವು ಉಳಿವಿನ ಪ್ರಶ್ನೆಯಾಗಿದೆ.

24 ವರ್ಷಗಳ ಬಳಿಕ ಗಾಂಧಿ ಕುಟುಂಬದವರಲ್ಲದ ನಾಯಕನನ್ನು ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ನಂತರ ನಡೆಯುತ್ತಿರವ ಮೊದಲ ಚುನಾವಣೆ ಇದಾಗಿದೆ ಮತ್ತು ಚುನಾವಣಾ ಕಣದಿಂದ ಪಕ್ಷದ ಪ್ರಮುಖ ನಾಯಕ ರಾಹುಲ್‌ ಗಾಂಧಿ ಸಂಪೂರ್ಣವಾಗಿ ಹೊರಗಿದ್ದದ್ದೂ ಈ ಚುನಾವಣೆಯ ಪ್ರಮುಖ ಅಂಶಗಳಲ್ಲಿ ಒಂದು.

2017ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 44 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಿದರೆ, ಕಾಂಗ್ರೆಸ್ 21 ಸ್ಥಾನಗಳನ್ನು ಪಡೆದುಕೊಂಡಿತ್ತು.

ಹಿಮಾಚಲ ಪ್ರದೇಶ ವಿಧಾನಸಭೆ

ಸಮೀಕ್ಷೆ; ಬಿಜೆಪಿ; ಕಾಂಗ್ರೆಸ್‌; ಎಎಪಿ

ನ್ಯೂಸ್‌ ಎಕ್ಸ್‌–ಜನ್‌ ಕೀ ಬಾತ್;32–40;27–34;0

ರಿಪಬ್ಲಿಕ್‌ ಟಿ.ವಿ.–ಪಿ ಮಾರ್ಕ್‌;34–39;28–33;0–1

ಟೈಮ್ಸ್‌ ನೌ–ಇಟಿಜಿ;38;28;0

ಝೀ ನ್ಯೂಸ್‌–ಬಾರ್ಕ್‌;35–40;20–25;0–3

ಆಜ್‌ತಕ್‌–ಆಕ್ಸಿಸ್ ಮೈ ಇಂಡಿಯಾ;24–34;30–40;0

ಇಂಡಿಯಾ ಟಿ.ವಿ.–ಮ್ಯಾಟ್ರೈಜ್‌;35–40;26–31;0

ಎಲ್ಲ ಸಮೀಕ್ಷೆಗಳ ಸರಾಸರಿ;35;30;0

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT