ಶನಿವಾರ, ಮಾರ್ಚ್ 25, 2023
26 °C

ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ; 8 ಲಕ್ಷ ಉದ್ಯೋಗ ಭರವಸೆ

ಪಿಟಿಐ Updated:

ಅಕ್ಷರ ಗಾತ್ರ : | |

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಣಾಳಿಕೆ ಬಿಡುಗಡೆಯಾಗಿದ್ದು, ಹಂತ ಹಂತವಾಗಿ ಎಂಟು ಲಕ್ಷ ಉದ್ಯೋಗ ಸೃಷ್ಟಿ ಮತ್ತು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಯಂತಹ ಭರವಸೆಗಳನ್ನು ಪ್ರಕಟಿಸಿದೆ.

ಶಿಮ್ಲಾದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, 'ಸಂಕಲ್ಪ ಪತ್ರ' ಪ್ರಣಾಳಿಕೆ ಬಿಡುಗಡೆಗೊಳಿಸಿದರು.

ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ, ಐದು ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ, ಉನ್ನತ ವ್ಯಾಸಂಗ ಮಾಡುವ ಹೆಣ್ಮಕ್ಕಳಿಗೆ ಸ್ಕೂಟರ್ ಮತ್ತು 6ರಿಂದ 12ರವರೆಗಿನ ವಿದ್ಯಾರ್ಥಿನಿಯರಿಗೆ ಸೈಕಲ್ ನೀಡಲಾಗುವುದು ಎಂದು ಪ್ರಣಾಳಿಕೆ ಭರವಸೆ ನೀಡಿದೆ.

ಇದನ್ನೂ ಓದಿ: 

 

 

'ಶಕ್ತಿ' ಕಾರ್ಯಕ್ರಮದಡಿಯಲ್ಲಿ ಧಾರ್ಮಿಕ ಸ್ಥಳಗಳು, ಮೂಲಸೌಕರ್ಯ ಹಾಗೂ ಸಾರಿಗೆಯನ್ನು ಅಭಿವೃದ್ಧಿಪಡಿಸಲು 10 ವರ್ಷಗಳ ಅವಧಿಯಲ್ಲಿ ₹12,000 ಕೋಟಿ ವ್ಯಯಿಸಲಾಗುವುದು ಎಂದು ನಡ್ಡಾ ತಿಳಿಸಿದರು.

 

ಹಿಮಾಚಲದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕೆ ಸಂಹಿತೆ ಜಾರಿ ಮಾಡಲಾಗುವುದು ಎಂದು ಹೇಳಿರುವ ನಡ್ಡಾ, ಅದಕ್ಕಾಗಿ ಸಮಿತಿಯನ್ನು ರೂಪಿಸಲಾಗುವುದು ಎಂದು ಭರವಸೆ ನೀಡಿದರು.

68 ಸದಸ್ಯ ಬಲದ ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು