ಸೋಮವಾರ, ಮೇ 23, 2022
30 °C

ಹಿಮಾಚಲ ಪ್ರದೇಶದಿಂದ ಭ್ರಷ್ಟಾಚಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ಕೇಜ್ರಿವಾಲ್‌

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಮಂಡಿ: ಹಿಮಾಚಲ ಪ್ರದೇಶದಿಂದ ಭ್ರಷ್ಟಾಚಾರವನ್ನು ಕಿತ್ತುಹಾಕುವ ಸಮಯ ಬಂದಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಬುಧವಾರ ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಆಮ್‌ ಆದ್ಮಿ ಪಕ್ಷವು ಆಯೋಜಿಸಿದ್ದ ರೋಡ್‌ ಶೋದಲ್ಲಿ ಭಾಗವಹಿಸಿ ಕೇಜ್ರಿವಾಲ್ ಮಾತನಾಡಿದರು. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್‌ ಅವರು ಈ ವೇಳೆ ಹಾಜರಿದ್ದರು. 

‘ಮೊದಲು ನಾವು ದೆಹಲಿಯಲ್ಲಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿದೆವು. ನಂತರ ಪಂಜಾಬ್‌ನಲ್ಲಿ ಭ್ರಷ್ಟಾಚಾರಕ್ಕೆ ಕಡಿವಾನ ಹಾಕಿದೆವು. ಈಗ ಹಿಮಾಚಲ ಪ್ರದೇಶದಿಂದ ಭ್ರಷ್ಟಾಚಾರವನ್ನು ಕಿತ್ತೊಗೆಯುವ ಸಮಯ ಬಂದಿದೆ’ ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ಈ ವರ್ಷಾಂತ್ಯದಲ್ಲಿ ಹಿಮಾಚಲ ಪ್ರದೇಶ ಮತ್ತು ಗುಜರಾತ್‌ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ. 

117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಎಪಿ 92 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು