ಸೋಮವಾರ, ಮಾರ್ಚ್ 27, 2023
32 °C

ನವೆಂಬರ್ 12ಕ್ಕೆ ಒಂದೇ ಹಂತದಲ್ಲಿ ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ನವೆಂಬರ್ 12ಕ್ಕೆ ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ.

68 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್‌ 8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಇದೇ 17ರಂದು ಅಧಿಸೂಚನೆ ಜಾರಿಗೆ ಬರಲಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್‌ 25ರಂದು ಕಡೆಯ ದಿನ. 27ರಂದು ನಾಮಪತ್ರಗಳ ಪರಿಶೀಲನೆ. 29ರಂದು ನಾಮಪತ್ರ ವಾಪಸ್‌ ಪಡೆಯಲು ಕಡೆಯ ದಿನವಾಗಿದೆ.

ಯಾವುದೇ ತೊಡಕಿಲ್ಲದೆ ಚುನಾವಣೆ ಆಯೋಜನೆಗೆ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ರಾಜಕೀಯ ಪಕ್ಷಗಳು, ರಾಜ್ಯದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ಪೊಲೀಸ್ ಇಲಾಖೆ ಮತ್ತು ಪೊಲೀಸ್ ನೋಡಲ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು