ಪ್ರಜಾ ಮತ 2022 | ಹಿಮಾಚಲ ಪ್ರದೇಶ: ನ.8ರಿಂದ ಖರ್ಗೆ ಪ್ರಚಾರ

ನವದೆಹಲಿ: ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಿಮಾಚಲ ಪ್ರದೇಶ ಹಾಗೂ ಗುಜರಾತ್‌ನಲ್ಲಿ ನಾಲ್ಕು ದಿನಗಳ ಕಾಲ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ನವೆಂಬರ್ 8 ಹಾಗೂ 9ರಂದು ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಗುಜರಾತ್‌ನಲ್ಲಿ ಪ್ರಚಾರ ನಡೆಸಲಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಹಿಮಾಚಲ ಪ್ರದೇಶದಲ್ಲಿ ಪ್ರಚಾರದ ನೇತೃತ್ವ ವಹಿಸಿದ್ದು, ನವೆಂಬರ್ 1ರ ಬಳಿಕ ಹಲವು ರ‍್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿ ಅವರು ಎರಡು ದಿನಗಳ ಕಾಲ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.