ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ:ಶೇ 23 ಅಭ್ಯರ್ಥಿಗಳಿಗೆ ಕ್ರಿಮಿನಲ್‌ ಹಿನ್ನೆಲೆ

ಹಿಮಾಚಲ ಪ್ರದೇಶ
Last Updated 3 ನವೆಂಬರ್ 2022, 20:43 IST
ಅಕ್ಷರ ಗಾತ್ರ

ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿರುವ 412 ಅಭ್ಯರ್ಥಿಗಳ ಅಪರಾಧ ಹಿನ್ನೆಲೆ, ಹಣಕಾಸು, ಶಿಕ್ಷಣ, ಲಿಂಗ ಹಾಗೂ ಇತರ ವಿಷಯಗಳ ಬಗ್ಗೆ ಅಸೋಸಿಯೇಷನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್‌ (ಎಡಿಆರ್‌) ವಿಶ್ಲೇಷಣೆ ನಡೆಸಿ ಗುರುವಾರ ವರದಿ ಪ್ರಕಟಿಸಿದೆ. ಕಣದಲ್ಲಿರುವ ಶೇ 23ರಷ್ಟು (94 ಮಂದಿ) ಅಭ್ಯರ್ಥಿಗಳು ಕ್ರಿಮಿನಲ್‌ ಹಿನ್ನೆಲೆ ಹೊಂದಿದ್ದಾರೆ. ಇಬ್ಬರು ಕೊಲೆ ಆರೋಪ ಹೊತ್ತಿದ್ದಾರೆ. ಮೂವರು ಕೊಲೆ ಯತ್ನದ ಆರೋಪಿಗಳು ಹಾಗೂ ಐವರು ಅಭ್ಯರ್ಥಿಗಳು ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ ಆರೋಪ ಹೊಂದಿದ್ದಾರೆ. ಶೇ 55ರಷ್ಟು ಅಭ್ಯರ್ಥಿಗಳು ಕೋಟ್ಯಧಿಪತಿಗಳು ಎಂದು ವರದಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT