ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ: ಕೇಬಲ್ ಕಾರ್‌ ಸ್ಥಗಿತ- 11 ಮಂದಿ ರಕ್ಷಣೆ

ಸತತ 6 ಗಂಟೆಗಳ ಕಾಲ ಕಾರ್ಯಾಚರಣೆ
Last Updated 20 ಜೂನ್ 2022, 15:19 IST
ಅಕ್ಷರ ಗಾತ್ರ

ಶಿಮ್ಲಾ: ಕೇಬಲ್‌ ಕಾರು ಸ್ಥಗಿತಗೊಂಡು ಐವರು ಮಹಿಳೆಯರು ಸೇರಿ 11 ಮಂದಿ ಪ್ರವಾಸಿಗರು ಕೆಲಕಾಲ ಅತಂತ್ರರಾಗಿದ್ದ ಘಟನೆಹಿಮಾಚಲ ಪ್ರದೇಶದ ಸೋಲನ್‌ ಜಿಲ್ಲೆಯ ಪರ್ವಾನೋ ಟಿಂಬರ್‌ ಟ್ರೈಲ್‌ನಲ್ಲಿ ಸೋಮವಾರ ನಡೆದಿದೆ.

ಸತತ 6 ಗಂಟೆಗಳ ಕಾರ್ಯಾಚರಣೆ ಬಳಿಕ ಎಲ್ಲರನ್ನೂ ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿತ್ತು. ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿ ಒಬ್ಬೊಬ್ಬರನ್ನೇ ರಕ್ಷಿಸಲಾಯಿತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್‌ಡಿಆರ್‌ಎಫ್‌) ಸ್ಥಳಕ್ಕೆ ಧಾವಿಸಿತ್ತು’ ಎಂದು ಸೋಲನ್ ಪೊಲೀಸ್‌ ವರಿಷ್ಠಾಧಿಕಾರಿ ವಿರೇಂದ್ರ ಶರ್ಮಾ ಅವರು ತಿಳಿಸಿದ್ದಾರೆ.

ತಾಂತ್ರಿಕ ದೋಷದಿಂದ ಈ ಘಟನೆ ಸಂಭವಿಸಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT