ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿ: ಪ್ರಿಯಾಂಕಾ ಭರವಸೆ

Last Updated 14 ಅಕ್ಟೋಬರ್ 2022, 13:09 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹೇಳಿಕೆ ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯದಲ್ಲಿ ಐದು ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ್ದಾರೆ.

ಸೋಲನ್ ಜಿಲ್ಲೆಯಲ್ಲಿ 'ಪರಿವರ್ತನಾ ಪ್ರತಿಜ್ಞಾ ರ‍್ಯಾಲಿ' ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ, ರಾಜ್ಯದಲ್ಲಿ 63,000 ಹುದ್ದೆಗಳು ಖಾಲಿ ಇವೆ. ಆದರೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಉದ್ಯೋಗವನ್ನು ಒದಗಿಸಲಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮುಂದಿನ ಐದು ವರ್ಷಗಳಲ್ಲಿ ಐದು ಲಕ್ಷ ನಿರುದ್ಯೋಗಿಗಳಿಗೆ ಉದ್ಯೋಗವನ್ನು ಒದಗಿಸಲಾಗುವುದು. ಅಲ್ಲದೆ ಮೊದಲ ಸಂಪುಟ ಸಭೆಯಲ್ಲೇ ಒಂದು ಲಕ್ಷ ಉದ್ಯೋಗ ಸೃಷ್ಟಿಯ ಭರವಸೆಯನ್ನು ನೀಡಿದರು.

ಮಹಿಳೆಯರಿಗೆ ಜೀವನ ಮಟ್ಟ ವೃದ್ಧಿಗೆ ಮಾಸಿಕ ₹1,500 ನೆರವು ನೀಡಲಾಗುವುದು ಎಂದು ವಾಗ್ದಾನ ನೀಡಿದರು.

ಇದುವೇ ಬದಲಾವಣೆಯ ಸಮಯ. ಇಲ್ಲವಾದ್ದಲ್ಲಿ ಮುಂದಿನ ವರ್ಷ ಏನೂ ಸಿಗಲಾರದು. ಕಾಂಗ್ರೆಸ್‌ಗೆ ಮತ ಹಾಕಿದರೆ ಹಿಮಾಚಲ ಪ್ರದೇಶ ಪ್ರಗತಿ ಸಾಧಿಸಲಿದೆ ಎಂದು ಹೇಳಿದರು.

ಬಿಜೆಪಿ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು ಕಿತ್ತೊಗೆಯಿತು ಎಂದು ಆರೋಪಿಸಿರುವ ಪ್ರಿಯಾಂಕಾ, ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ.

ಕೇಂದ್ರ ಚುನಾವಣಾ ಆಯೋಗವು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕವನ್ನು ಘೋಷಿಸಿದೆ. ರಾಜ್ಯದಲ್ಲಿ ನವೆಂಬರ್ 12ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT