ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ ಚುನಾವಣೆ: ಮತದಾನ ಆರಂಭ

Last Updated 12 ನವೆಂಬರ್ 2022, 4:49 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ ಎಂಟು ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 5ರವರೆಗೆ ಮುಂದುವರಿಯಲಿದೆ.

68 ಸದಸ್ಯ ಬಲದ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಎರಡನೇ ಬಾರಿಗೆ ಅಧಿಕಾರ ಹಿಡಿದು ಇತಿಹಾಸ ಸೃಷ್ಟಿಸುವ ಇರಾದೆಯಲ್ಲಿದೆ. ಅತ್ತ ಕಾಂಗ್ರೆಸ್‌ಗೆ ಅಳಿವು-ಉಳಿವಿನ ಪ್ರಶ್ನೆ ಎದುರಾಗಿದೆ.

ಹಿಮಾಚಲ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸುವಂತೆ ಮತದಾರರಿಗೆ ಮನವಿ ಮಾಡಿದ್ದಾರೆ.

ಪ್ರತಿ ಮತವು ಸಮೃದ್ಧ ರಾಜ್ಯವನ್ನು ನಿರ್ಮಿಸಲು ನೆರವಾಗಲಿದೆ ಎಂದು ಮುಖ್ಯಮಂತ್ರಿ ಜೈರಾಮ್‌ ಠಾಕೂರ್‌ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಒಂದು ಲಕ್ಷ ಉದ್ಯೋಗಗಳನ್ನು ಒದಗಿಸುವುದು ಮತ್ತು ಹಳೆಯ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಹಿಮಾಚಲದಲ್ಲಿ 55 ಲಕ್ಷಕ್ಕೂ ಹೆಚ್ಚು ಮತದಾರರು 412 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT