ಶುಕ್ರವಾರ, ಜನವರಿ 27, 2023
17 °C

ಹಿಮಾಚಲ ಪ್ರದೇಶ: ಸಿ.ಎಂ ರೇಸ್‌ನಲ್ಲಿ ಪ್ರತಿಭಾ ಸಿಂಗ್‌ ಸೇರಿ ಮೂವರ ಹೆಸರು ಮುಂಚೂಣಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗೆ ಗಾದಿಗೆ ವಿರೋಧ ಪಕ್ಷದ ನಾಯಕರಾಗಿದ್ದ ಮುಕೇಶ್‌ ಅಗ್ನಿಹೋತ್ರಿ, ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದ ಸುಖ್ವಿಂದರ್‌ ಸಿಂಗ್‌ ಸುಖು ಹಾಗೂ ರಾಜ್ಯ ಘಟಕದ ಅಧ್ಯಕ್ಷೆ ಪ್ರತಿಭಾ ಸಿಂಗ್‌ ಅವರ ಹೆಸರು ಮುಂಚೂಣಿಯಲ್ಲಿದೆ.

ಪಕ್ಷದ ರಾಜ್ಯ ಉಸ್ತುವಾರಿ ರಾಜೀವ್‌ ಶುಕ್ಲಾ ಅವರ ನೇತೃತ್ವದಲ್ಲಿ ಪಕ್ಷದ ಶಾಸಕರ ಸಭೆ ಶುಕ್ರವಾರ ನಡೆಯಲಿದೆ. ಮುಖ್ಯಮಂತ್ರಿಯ ಆಯ್ಕೆ ಅಧಿಕಾರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ನೀಡುವ ಒಂದು ಸಾಲಿನ ತೀರ್ಮಾನವನ್ನು ಸಭೆಯಲ್ಲಿ ಅಂಗೀಕರಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ಶಿಮ್ಲಾಕ್ಕೆ ತೆರಳುವಂತೆ ಛತ್ತೀಸಗಢದ ಮುಖ್ಯಮಂತ್ರಿ ಭೂಪೇಶ ಬಘೇಲ್‌ ಅವರಿಗೆ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚಿಸಿದ್ದಾರೆ ಎಂದೂ ಮೂಲಗಳು ಹೇಳಿವೆ.  

ಪ್ರತಿಭಾ ಅವರು ರಾಜ್ಯದಾದ್ಯಂತ ಬಿರುಸಿನ ಪ್ರಚಾರ ಕೈಗೊಂಡಿದ್ದರು. ಸಂಸದೆಯಾಗಿರುವ ಅವರ ಪರವಾಗಿ ಪಕ್ಷದ ಶಾಸಕರು ಒಲವು ತೋರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಪ್ರತಿಭಾ ಅವರು, ವೀರಭದ್ರ ಸಿಂಗ್‌ ಅವರ ಪತ್ನಿ. ಈ ಅಂಶವೂ ಅವರಿಗೆ ಪೂರಕವಾಗುವ ಸಾಧ್ಯತೆ ಇದೆ.

ಪ್ರತಿಭಾ ಅವರ ಮಗ ವಿಕ್ರಮಾದಿತ್ಯ ಸಿಂಗ್‌ ಅವರು ಶಿಮ್ಲಾ ಗ್ರಾಮಾಂತರ ಕ್ಷೇತ್ರದಿಂದ ಈ ಬಾರಿ ಆಯ್ಕೆಯಾಗಿದ್ದಾರೆ. ಇವರೂ ಕೂಡ ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿದ್ದಾರೆ. ಆದರೆ ಈ ಸ್ಥಾನಕ್ಕೆ ಪರಿಗಣಿಸಲು ಅವರು ತೀರಾ ಚಿಕ್ಕವರು ಎನ್ನವುದು ಹಲವರ ಅಭಿಪ್ರಾಯ.

ತಮ್ಮ ಕೆಲಸ ಪರಿಗಣಿಸಿ ಪಕ್ಷದ ಹೈಕಮಾಂಡ್‌ ತಮ್ಮನ್ನು ಆಯ್ಕೆ ಮಾಡಬಹುದು ಎಂಬ ವಿಶ್ವಾಸದಲ್ಲಿ ಮುಕೇಶ್‌, ಸುಖ್ವಿಂದರ್‌ ಇದ್ದಾರೆ.

ಓದಿ... ವಿಶ್ಲೇಷಣೆ: ಬಿಜೆಪಿಗೆ ಅರ್ಥವಾಗದ ಹಿಮಾಚಲ ಪ್ರದೇಶ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು