ಮಂಗಳವಾರ, ಮೇ 17, 2022
25 °C

ಹಿಮಾಚಲ ಪ್ರದೇಶದಲ್ಲಿ ಕೋವಿಡ್ ನಿರ್ಬಂಧ ತೆರವು, ಮಾಸ್ಕ್ ಬಳಸುವಂತೆ ಕರೆ

ಪಿಟಿಐ Updated:

ಅಕ್ಷರ ಗಾತ್ರ : | |

ಶಿಮ್ಲಾ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ತೀವ್ರ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಕೋವಿಡ್ ನಿರ್ಬಂಧಗಳನ್ನು ಹಿಂಪಡೆಯುವುದಾಗಿ ಹಿಮಾಚಲ ಪ್ರದೇಶದ ಸರ್ಕಾರ ಘೋಷಿಸಿದ್ದು, ಜನರು ಮಾಸ್ಕ್ ಬಳಸಬೇಕು ಮತ್ತು ಕೈಗಳ ನೈರ್ಮಲ್ಯ ಕಾಯ್ದುಕೊಳ್ಳಬೇಕು ಎಂದಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.

ವಿಪತ್ತು ನಿರ್ವಹಣಾ ಘಟಕ ಸುತ್ತೋಲೆ ಹೊರಡಿಸಿದ್ದು, ಸದ್ಯದ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಕೋವಿಡ್ ಪ್ರಕರಣಗಳ ಪಾಸಿಟಿವಿಟಿ ದರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ, 2005ರ ಅಡಿಯಲ್ಲಿ ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ನಿರ್ಬಂಧಗಳನ್ನು ವಿಧಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ್ದ ಸಲಹೆಗಳ ಪ್ರಕಾರ, ಮಾಸ್ಕ್ ಬಳಸುವುದು ಮತ್ತು ಕೈಗಳ ನೈರ್ಮಲ್ಯ ಕಾಪಾಡಿಕೊಳ್ಳುವುದನ್ನು ಮುಂದುವರಿಸಬೇಕು ಎಂದು ಸಲಹೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು