ಗುರುವಾರ , ಡಿಸೆಂಬರ್ 1, 2022
25 °C

ಹಿಮಾಚಲ ಪ್ರದೇಶ: ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ–ಪ್ರಧಾನಿ ಮೋದಿ ವಿಶ್ವಾಸ

ಪಿಟಿಐ Updated:

ಅಕ್ಷರ ಗಾತ್ರ : | |

ಮಂಡಿ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಮತದಾರರು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಗೆ ಅಧಿಕಾರ ನೀಡಲು ಮನಸ್ಸು ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿಳಿಸಿದರು.

ಕೆಲ ತಿಂಗಳ ಹಿಂದೆ ನಡೆದ ಉತ್ತರಪ್ರದೇಶ ಮತ್ತು ಉತ್ತರಾಖಂಡದ ಚುನಾವಣೆಯಲ್ಲಿ ಅಲ್ಲಿನ ಮತದಾರರು ಬಿಜೆಪಿ ಸರ್ಕಾರ ಮತ್ತೆ ರಚನೆಯಾಗುವಂತೆ ಮಾಡಿದ್ದಾರೆ. ಇದೇ ರೀತಿಯ ಫಲಿತಾಂಶ ಹಿಮಾಚಲ ಪ್ರದೇಶದಲ್ಲೂ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮಂಡಿಯಲ್ಲಿ ನಿಗದಿಯಾಗಿದ್ದ ಬಿಜೆಪಿ ಯುವ ಪಡೆಯ ಸಮಾವೇಶವನ್ನು ಉದ್ದೇಶಿಸಿ ಮೋದಿ ಅವರು ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡಿದರು. ಈ ಸ್ಥಳಕ್ಕೆ ಹೆಲಿಕಾಪ್ಟರ್‌ನಲ್ಲಿ ಹೋಗಬೇಕಿದ್ದ ಮೋದಿ ಅವರು, ಪ್ರತಿಕೂಲ ಹವಾಮಾನದ ಪರಿಣಾಮ ಹೋಗಲಾಗಲಿಲ್ಲ.

ಈ ಹಿಂದೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿನ ಮತದಾರರು ಒಂದೊಂದು ಬಾರಿ ಒಂದೊಂದು ಪಕ್ಷಕ್ಕೆ ಅಧಿಕಾರ ನೀಡುವುದನ್ನು ವಾಡಿಕೆ ಮಾಡಿಕೊಂಡಿದ್ದರು. ಆದರೆ ಈ ಬಾರಿ ಅವರು ಆ ಮನಸ್ಥಿತಿಯನ್ನು ಬದಲಿಸಿಕೊಂಡರು ಎಂದು ಮೋದಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು