ಬುಧವಾರ, ಸೆಪ್ಟೆಂಬರ್ 29, 2021
20 °C

ಹಿಂದಿ ದಿವಸ್ ಆಚರಣೆ: ಸಾಮಾಜಿಕ ತಾಣಗಳಲ್ಲಿ ಪರ-ವಿರೋಧ ಚರ್ಚೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Home Minister Amit Shah DH File photo

ಬೆಂಗಳೂರು: ದೇಶದಲ್ಲಿ ಮಂಗಳವಾರ, ಸೆಪ್ಟೆಂಬರ್ 14ರಂದು ಹಿಂದಿ ದಿವಸ್ ಆಚರಿಸಲಾಗುತ್ತಿದೆ.

ಹಿಂದಿ ಭಾಷೆಯ ಹಿನ್ನೆಲೆ ಮತ್ತು ಬಳಕೆಗೆ ಉತ್ತೇಜನ ನೀಡುವುದು ಸಹಿತ ಹಲವು ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಕೈಗೊಳ್ಳಲಾಗಿದೆ.

ಆದರೆ ದಕ್ಷಿಣದ ರಾಜ್ಯಗಳಲ್ಲಿ ಮಾತ್ರ ಹಿಂದಿ ದಿವಸ್ ಆಚರಣೆಗೆ ವಿರೋಧ ಕೇಳಿಬಂದಿದೆ. ಜತೆಗೆ ಹಿಂದಿ ಹೇರಿಕೆ ನಿಲ್ಲಿಸಿ ಎನ್ನುವ ಪ್ರತಿಭಟನೆ, ಆನ್‌ಲೈನ್ ಅಭಿಯಾನ ಕೂಡ ನಡೆಯುತ್ತಿದೆ.

ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಹಿಂದಿ ದಿವಸ ಆಚರಣೆ ಕುರಿತಂತೆ ಟ್ವೀಟ್ ಮೂಲಕ ಶುಭಕೋರಿದೆ. ಜತೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಕೂಡ ಹಿಂದಿ ದಿವಸ್ ಕುರಿತು ಟ್ವೀಟ್ ಮಾಡಿದ್ದಾರೆ.

ಆದರೆ ಕರ್ನಾಟಕ, ಆಂಧ್ರ ಪ್ರದೇಶ, ತಮಿಳು ನಾಡು ಮತ್ತು ಕೇರಳದಲ್ಲಿ ಹಿಂದಿ ದಿವಸ್ ಆಚರಣೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದು, #StopHindiImposition ಎಂಬ ಹ್ಯಾಶ್‌ಟ್ಯಾಗ್ ಟ್ವಿಟರ್‌ ಟ್ರೆಂಡಿಂಗ್ ಆಗಿದೆ.

ರಾಜ್ಯದಲ್ಲಿ ಕನ್ನಡ ಪರ ಸಂ‌ಘಟನೆಗಳು ಕೂಡ ಹಿಂದಿ ಹೇರಿಕೆ ನಿಲ್ಲಿಸಿ ಎಂಬ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು